ಬೆಂ.ಗ್ರಾ | ಅಮಾನಿಕೆರೆ ದಡದ ಉದ್ದಕ್ಕೂ ಬಿದ್ದಿರುವ ಕಟ್ಟಡ ತ್ಯಾಜ್ಯ; ಕೆರೆಗೆ ಅಪಾಯ

Date:

Advertisements

ಅಮಾನಿಕೆರೆಯ ದಡದಲ್ಲಿ ಉದ್ದಕ್ಕೂ ಕಟ್ಟಡ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಇದರಿಂದ ಕೆರೆ ಅಂಗಳ ಕಟ್ಟಡ ತ್ಯಾಜ್ಯದಿಂದ ತುಂಬಿ ಹೋಗಿದ್ದು, ಕೆರೆಗೆ ಅಪಾಯ ಎದುರಾಗಿದೆ ಎಂದು ವಿಜಯಪುರ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

“ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರದಿಂದ ದಂಡಿಗಾನಹಳ್ಳಿಯ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿರುವ ಕೆರೆಯ ಅಂಗಳದಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ. ಇದರಿಂದಾಗಿ ಕೆರೆಯ ಬಹಳಷ್ಟು ಪ್ರದೇಶ ಈಗಾಗಲೇ ಮುಚ್ಚಿಹೋಗಿದೆ. ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಸ್ಥಳೀಯರು ದೂರಿದ್ದಾರೆ.

“ಕೆರೆಯ ಅಂಗಳದಲ್ಲಿ ಕಟ್ಟಡ ತ್ಯಾಜ್ಯ ಸುರಿದಿರುವ ಕುರಿತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೆ, ಕೆರೆ ತಮ್ಮ ವ್ಯಾಪ್ತಿಗೆ ಬರುತ್ತದೆ. ಆದರೆ, ಈಗ ಎಚ್ ಎನ್ ವ್ಯಾಲಿ ಯೋಜನೆಗೆ ಸೇರ್ಪಡೆಗೊಂಡಿದೆ. ಕೆರೆಯ ನಿರ್ವಹಣೆಯನ್ನು ಅವರೇ ಮಾಡುತ್ತಿದ್ದಾರೆ” ಎಂದು ಹೇಳಿ ಜಾರಿಕೊಳ್ಳುತ್ತಿದ್ದಾರೆ ಎಂದು ನಿವಾಸಿಗಳು ದೂರಿದ್ದಾರೆ.

“ಎಚ್ ಎನ್ ವ್ಯಾಲಿ ಯೋಜನೆಯ ಅಧಿಕಾರಿಗಳು ಈ ಕಡೆಗೆ ಸುಳಿಯುವುದೇ ಇಲ್ಲ. ಕೆರೆಗಳಿಗೆ ನೀರು ಹರಿಸುವುದಷ್ಟೇ ತಮ್ಮ ಕೆಲಸವೆಂದು ಭಾವಿಸಿಕೊಂಡಿದ್ದಾರೆ” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

“ಕೆರೆಯ ಪ್ರದೇಶ ಅಳತೆ ಮಾಡಿ, ಒತ್ತುವರಿ ತೆರವುಗೊಳಿಸಬೇಕು. ಕೆರೆಯಂಗಳದಲ್ಲಿ ಬೆಳೆದು ನಿಂತಿರುವ ಗಿಡಗಂಟಿ ತೆರವುಗೊಳಿಸಬೇಕು. ಕೆರೆಯಂಗಳದಲ್ಲಿರುವ ದೇವಾಲಯಗಳಲ್ಲಿ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳಂದು ಪ್ರಸಾದ ವಿತರಣೆಗೆ ನೀಡುವ ಪ್ಲಾಸ್ಟಿಕ್ ಕಪ್‌ಗಳನ್ನು ಕೆರೆಗೆ ಹಾಕುತ್ತಿದ್ದಾರೆ. ಕೂಡಲೇ ಇದನ್ನು ತಡೆಯಬೇಕು” ಎಂದು ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X