- ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ
- ನ.15ರಂದು ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕಾರ ಸಮಾರಂಭ
ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದು, ಸೋಮವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದುಕೊಂಡರು.
ಸೋಮವಾರ ಬೆಳಗ್ಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಮುಂದಿನ ಹೋರಾಟಕ್ಕೆ ಸಹಕಾರ ಹಾಗೂ ಮಾರ್ಗದರ್ಶನ ಕೋರಿದರು. ಇದಕ್ಕೂ ಮೊದಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ದೀಪಾವಳಿ ಶುಭಾಶಯ ತಿಳಿಸಿ ಅವರ ಆಶೀರ್ವಾದ ಪಡೆದುಕೊಂಡರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ, “ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ. ನಾನಷ್ಟೇ ಅಲ್ಲ; ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ; ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ” ಎಂದರು.
ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆಯಲಾಯಿತು. ವಿಶ್ರಾಂತಿಯಲ್ಲಿರುವ ತಾವು ಶೀಘ್ರವಾಗಿ ಚೇತರಿಸಿಕೊಂಡು ಪಕ್ಷ ಸಂಘಟನೆಗೆ ಸಕ್ರಿಯರಾಗಲೆಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ ಕೃಷ್ಣಪ್ಪನವರು, ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ… pic.twitter.com/hPfa7qSzfM
— Vijayendra Yediyurappa (@BYVijayendra) November 13, 2023
“ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ಬೊಮ್ಮಾಯಿ ಅವರು ಹೇಳಿದರು” ಎಂದರು.
“ನಾನು ರಾಜ್ಯಾಧ್ಯಕ್ಷನಾಗಿರುವುದಕ್ಕೆ ಬಸವರಾಜ ಬೊಮ್ಮಾಯಿ ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿ ಹೇಳಿದರು” ಎಂದು ತಿಳಿಸಿದರು.
“ನ.15ರಂದು ಬುಧವಾರ ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದ ಮಾಡಬೇಕೆಂದು ಹಿರಿಯ ನಾಯಕರನ್ನು ಕೋರಿದ್ದೇನೆ. ಬರಲೆತ್ನಿಸುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.
ಭೇಟಿ ವೇಳೆ ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇದ್ದರು.