ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ತಾಲೂಕಿನ ಮೇಗಳಾಪುರ ಬಳಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಅಪಘಾತದಲ್ಲಿ ಸಂಭವಿಸಿದೆ. ದರ್ಶನ್ ಎಂಬ ಯುವಕ ಮೃತಪಟ್ಟಿದ್ದು, ಉಳಿದ ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಬಂಡಿಪಾಳ್ಯ ಗ್ರಾಮದ ಯುವಕರು ಎಂದು ತಿಳಿದುಬಂದಿದೆ.
ಸ್ಥಳೀಯ ಶಾಸಕ ಜಿ ಟಿ ದೇವೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಯುವಕರ ಆರೋಗ್ಯ ವಿಚಾರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮನಗರ | ತುಂಡಾದ ಬಸ್ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ