ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅಮಾನುಷವಾಗಿ ಅತ್ಯಾಚಾರ ವೆಸಗಿದ ಘಟನೆ ಆಗ್ರಾದಲ್ಲಿ ನಡೆದಿದೆ
ಆಗ್ರಾದ ಹೋಂಸ್ಟೇ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಮದ್ಯ ಕುಡಿಸಿ ನಂತರ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಸಹಾಯಕ್ಕಾಗಿ ಆಕೆ ಅಳುತ್ತಿರುವುದನ್ನು ತೋರಿಸುವ ವಿಡಿಯೋಗಳು ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ.
ಆರೋಪಿಗಳ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ವೈರಲ್ ಆಗಿರುವ ಮತ್ತೊಂದು ವಿಡಿಯೋದಲ್ಲಿ, “ದಯವಿಟ್ಟು ನನ್ನನ್ನು ರಕ್ಷಿಸಿ! ನನಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಅವರು ನನ್ನನ್ನು ಎಳೆದುಕೊಂಡು ಹೋಗುತ್ತಿದ್ದಾರೆ. ನನ್ನ ಫೋನ್ ಕಿತ್ತುಕೊಂಡಿದ್ದಾರೆ. ಅವರು ನನ್ನ ವಿಡಿಯೋವನ್ನು ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ, ಅವರು ನನ್ನಿಂದ ಹಣವನ್ನೂ ತೆಗೆದುಕೊಂಡಿದ್ದಾರೆ,” ಎಂದು ಮಹಿಳೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 7 ಸಾವು
ಇನ್ನೊಂದು ವಿಡಿಯೋದಲ್ಲಿ “ದಯವಿಟ್ಟು ನನಗೆ ಸಹಾಯ ಮಾಡಿ!”, ಎಂದು ಆಕೆ ಹೇಳುತ್ತಿರುವುದು ಕೇಳಿಬರುತ್ತಿದೆ. ಒಬ್ಬ ವ್ಯಕ್ತಿ ಅವಳನ್ನು ಕೋಣೆಯೊಳಗೆ ಎಳೆದೊಯ್ದಿದ್ದಾನೆ. ಈ ಸಂದರ್ಭದಲ್ಲಿ ಆರೋಪಿಗಳು ಚಿತ್ರಹಿಂಸೆ ನೀಡುತ್ತಿದ್ದಾರೆ.
ಮತ್ತೊಂದು ವಿಡಿಯೋದಲ್ಲಿ, ಈ ಹಿಂದೆ ಮಾಡಿದ ಆಕ್ಷೇಪಾರ್ಹ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಹೇಳುವುದನ್ನು ಕೇಳಬಹುದು.
“ತನ್ನ ಸ್ನೇಹಿತೆ ಮತ್ತು ಇತರ ಕೆಲವರು ತನಗೆ ಬಲವಂತವಾಗಿ ಕುಡಿಯಲು ಒತ್ತಾಯಿಸಿದರು. ಪ್ರತಿಭಟಿಸಲು ಪ್ರಯತ್ನಿಸಿದಾಗ ನನ್ನನ್ನು ಕೊಠಡಿಯೊಳಗೆ ಎಳೆದೊಯ್ದು ಥಳಿಸಿದ್ದಾರೆ. ತಲೆಯ ಮೇಲೆ ಗಾಜಿನ ಬಾಟಲಿಯಿಂದ ಹಲ್ಲೆ ಮಾಡಲಾಗಿದೆ” ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.
In #UttarPradesh's #Agra, a woman employee at a homestay alleged she was forced into prostitution and was asked to have sex with multiple men on Nov 11. When she refused, she was attacked with beer bottle.
A case of rape, assualt and attempt to murder was registered at #Tajganj… pic.twitter.com/RvGheHjfDg
— Hate Detector 🔍 (@HateDetectors) November 13, 2023
“ಸಹಾಯಕ್ಕಾಗಿ ಅಳುತ್ತಿದ್ದ ಸಂತ್ರಸ್ತೆಯಿಂದ ನಮಗೆ ಶನಿವಾರ ಮಧ್ಯರಾತ್ರಿ ಕರೆ ಬಂದಿತು. ನಾವು ಹೋಂಸ್ಟೇಗೆ ಧಾವಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಸಂತ್ರಸ್ತೆಯ ವಯಸ್ಸು ಸುಮಾರು 25 ವರ್ಷ. ಆಕೆ ಹೋಂಸ್ಟೇಯಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು” ಎಂದು ಹಿರಿಯ ಪೊಲೀಸ್ ಅಧಿಕಾರಿ ಸದರ್ ಅರ್ಚನಾ ಸಿಂಗ್ ತಿಳಿಸಿದ್ದಾರೆ.
ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಡಿಗೆ ಕಟ್ಟಡವಾಗಿರುವ ಹೋಮ್‌ಸ್ಟೇಯನ್ನು ಮುಚ್ಚಲಾಗಿದೆ.