ಬೆಂಗಳೂರು | ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ನಾನಾ ಕಡೆಗಳಲ್ಲಿ ಅಕ್ರಮವಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ನ.13ರಂದು ದಾಳಿ ನಡೆಸಿದ್ದಾರೆ.

ದಾಳಿ ನಡೆದ ಸ್ಥಳಗಳಲ್ಲಿ ದೊರೆತ 23,42,400 ನಗದು, 7 ಲಕ್ಷ ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, 109 ಚೆಕ್​ಗಳು, 50 ಅನ್ ಡಿಮಾಂಡ್ ಪ್ರಾಮಿಸರಿ ನೋಟ್, 42 ಖಾಲಿ ಬಾಂಡ್ ಪೇಪರ್, 85 ಶುದ್ದ ಕ್ರಯ ಪತ್ರಗಳು, 35 ಸಾಲ ನಮೂದಿಸಿದ ದಾಖಲಾತಿ, 11 ಈ ಸ್ಪಾಂಪ್ ಪೇಪರ್​ಗಳು, 45 ಪಾಕೆಟ್ ಪುಸ್ತಕ, 15 ಅಗ್ರಿಮೆಂಟ್ ಪ್ರತಿಗಳು, 6 ರೋಲೆಕ್ಸ್ ವಾಚ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಎಎಸ್ಐ ಮಗಳಾದ ಶೀಲಾ ಮನೆ, ಕಾಮಾಕ್ಷಿಪಾಳ್ಯದಲ್ಲಿ ಜಗದೀಶ್ ಅಲಿಯಾಸ್ ಟಾಮಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜತೆಗೆ, ಚಾಮರಾಜಪೇಟೆ, ಬಸವೇಶ್ವರನಗರ, ಸಿಟಿ ಮಾರ್ಕೆಟ್‌ನಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸೈಬರ್ ವಂಚನೆ | ಅಕ್ರಮ ಚಟುವಟಿಕೆಯ ಕಥೆ ಹೇಳಿ ₹76 ಸಾವಿರ ವಂಚನೆ

ಆರ್ಥಿಕವಾಗಿ ಕುಗ್ಗಿದ ಜನರು ಆದಷ್ಟು ಬೇಗ ಹಣ ಬೇಕು ಎಂಬ ಕಾರಣಕ್ಕೆ ಬಡ್ಡಿಗೆ ಹಣ ಪಡೆಯುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಬಡ್ಡಿಗೆ ಮೀಟರ್ ಬಡ್ಡಿ ಹಾಕಿ ಜನರಿಗೆ ಹಿಂಸೆ ನೀಡಿ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದ ಹಿನ್ನೆಲೆ, ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನಿ ಲಾಂಡರಿಂಗ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X