ಉಡುಪಿ | ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ ಪ್ರಕರಣ; ತನಿಖೆಗೆ 5 ತಂಡ ರಚನೆ

Date:

Advertisements

ಉಡುಪಿ ಜಿಲ್ಲೆಯ ನೇಜಾರುವಿನ ತೃಪ್ತಿ ನಗರದಲ್ಲಿ ಭಾನುವಾರ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಎಸ್‌ಪಿ ಅರುಣ್ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಿದೆ.

ಕೌಟುಂಬಿಕ ಕಾರಣ, ಪೂರ್ವದ್ವೇಷ ಅಥವಾ ವ್ಯವಹಾರ ಮತ್ತಿತರ ಆಯಾಮಗಳಲ್ಲಿ ಈ ತಂಡಗಳು ತನಿಖೆ ನಡೆಸಲಿವೆ. ಮೃತ ಕುಟುಂಬದ ಓರ್ವ ಸದಸ್ಯ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಇಬ್ಬರು ಯುವತಿಯರೂ ಉದ್ಯೋಗದಲ್ಲಿದ್ದಾರೆ. ಮನೆಯ ಯಜಮಾನ ನೂರ್ ಮುಹಮ್ಮದ್ ವಿದೇಶದಲ್ಲಿ ಉದ್ಯೋಗದಲ್ಲಿದ್ದರು.

ಸಂತೆಕಟ್ಟೆ ಜಂಕ್ಷನ್, ಕರಾವಳಿ ಜಂಕ್ಷನ್‌ನಲ್ಲಿ ಆರೋಪಿ ಓಡಾಡಿದ್ದು, ಅಲ್ಲಿನ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಆರೋಪಿಯನ್ನು ಕೊಲೆ ನಡೆದ ಮನೆಗೆ ಬಿಟ್ಟ ಆಟೋ ಚಾಲಕನ ಬಳಿಯೂ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂ. ಗ್ರಾಮಾಂತರ | ಫೋಟೋ ಕಳಿಸಿಲ್ಲವೆಂದು ಯುವಕನನ್ನೇ ಕೊಂದ ದುಷ್ಕರ್ಮಿಗಳ ಗುಂಪು

ಕೊಲೆಯಾದ ಕುಟುಂಬದ ಸದಸ್ಯರು ಕೆಲಸ ಮಾಡುತ್ತಿದ್ದ ಸ್ಥಳಗಳಲ್ಲಿಯೂ ಪೊಲೀಸರು ಮಾಹಿತಿ ಸಂಗ್ರಹಿಸುವ ಸಾಧ್ಯತೆ ಇದೆ. ಎಲ್ಲ ಆಯಾಮಗಳಲ್ಲಿಯೂ ಶೀಘ್ರವೇ ತನಿಖೆ ನಡೆಸಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಉಡುಪಿ ಎಸ್‌ಪಿ ಡಾ.ಅರುಣ್ ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X