ಶಿವಮೊಗ್ಗ | ಲಕ್ಷ್ಮೀ ಪೂಜೆ ಮಾಡಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ

Date:

Advertisements

ಮುಸ್ಲಿಂ ಯುವಕನೊಬ್ಬ ತನ್ನ ಮೊಬೈಲ್ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡಿಸಿ, ಸೌಹಾರ್ದತೆ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲೂಕಿನಲ್ಲಿ ನಡೆದಿದೆ.

ಮೂರು ದಿನಗಳಿಂದ ದೀಪಾವಳಿ ಹಬ್ಬವನ್ನು ಎಲ್ಲಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬದ ಭಾಗವಾಗಿ ತಾಲೂಕಿನ ರಿಪ್ಪನಪೇಟೆ ಗ್ರಾಮದಲ್ಲಿ ತನ್ವೀರ್ ಎಂಬವರು ತಮ್ಮ ಅಂಗಡಿಯಲ್ಲಿ ಹಿಂದು ಪೂಜಾರಿಯನ್ನು ಕರೆಸಿ ಲಕ್ಷ್ಮೀ ಪೂಜೆ ಮಾಡಿದ್ದಾರೆ.

ತನ್ವೀರ್ ಅವರು ಅರಸಾಳು ಗ್ರಾಮದವರಾಗಿದ್ದು, ರಿಪ್ಪನಪೇಟೆಯಲ್ಲಿ ‘ತನ್ವಿ ಮೊಬೈಲ್ ವರ್ಲ್ಡ್‌’ ಎಂಬ ಅಂಗಡಿ ನಡೆಸುತ್ತಿದ್ದಾರೆ. ಅವರು ಈ ವರ್ಷ ಮಾತ್ರವಲ್ಲದೆ, ಪ್ರತಿ ವರ್ಷವೂ ತಮ್ಮ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡಿಸುತ್ತಾರೆ. ಜೊತೆಗೆ ಮುಸ್ಲಿಂ ಧರ್ಮಗುರುಗಳಿಂದಲೂ ಪ್ರಾರ್ಥನೆ ಸಲ್ಲಿಸುತ್ತಾರೆ. ಹಿಂದು-ಮುಸ್ಲಿಂ ಎರಡೂ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಭಾವೈಕ್ಯತೆ ಸಾರುತ್ತಿದ್ದಾರೆ.

Advertisements

“ನಾನು ಜಾತ್ಯಾತೀತತೆಯನ್ನು ಬೆಂಬಲಿಸುತ್ತೇನೆ. ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಹೋಗುತ್ತೇನೆ. ಎಲ್ಲ ಧರ್ಮವನ್ನು ಪೂಜಿಸುತ್ತೇನೆ. ಪೂಜೆಯಲ್ಲಿ ನಮ್ಮ ಕುಟುಂಬದವರು, ಸ್ನೇಹಿತರೂ ಕೂಡ ಭಾಗಿಯಾಗುತ್ತಾರೆ” ಎಂದು ತನ್ವೀರ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X