ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ಕೋಲಾರದ ಕೆಂದಟ್ಟಿ ಬಳಿ ನಡೆದಿದೆ.
ಕೆಂದಟ್ಟಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ 17 ಮಂದಿಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳೆಲ್ಲರೂ ಆಂಧ್ರ ಪ್ರದೇಶದ ಬಾಯಿಕೊಂಡದಲ್ಲಿರುವ ಗಂಗಮ್ಮ ದೇಗುಲಕ್ಕೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.