ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಲಕ್ಷ ಬೆಲೆಬಾಳುವ ನಾಲ್ಕು ಬೈಕ್‌ಗಳು ಸುಟ್ಟ ಭಸ್ಮವಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ ಶರ್ಮಾ ಎಂಬುವವರಿಗೆ ಸೇರಿದ ಬೈಕ್‌ಗಳಿಗೆ ಬೆಂಕಿ ತಗುಲಿದೆ. ಅವರು ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್‌ಗಳನ್ನು ಖರೀದಿ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ಬೆಳಕಿನ ಹಬ್ಬ | ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಏರಿಕೆ
ಮನೆಯ ಆವರಣಲ್ಲಿ ಎಲೆಕ್ಟ್ರಿಕ್ ಬೈಕ್‌ಗಳನ್ನು ಶ್ರೀಕಾಂತ್ ಶರ್ಮಾ ಅವರು ನಿಲ್ಲಿಸಿದ್ದಾರೆ. ಈ ವೇಳೆ, ಹೊರಗಡೆಯಿಂದ ಏನೋ ಶಬ್ಧ ಕೇಳಿಬರುತ್ತಿದೆ ಎಂದು ಹೊರಗೆ ಬಂದು ನೋಡಿದಾಗ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ತಿಳಿದುಬಂದಿದೆ.
ಕೂಡಲೇ ಎಚ್ಚೇತ್ತ ಅವರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಈ ವೇಳೆ, ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದ್ದಾರೆ.
ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.