ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ ಕುಮಾರಸ್ವಾಮಿ: ಡಿ ಕೆ ಶಿವಕುಮಾರ್‌ ಟೀಕೆ

Date:

Advertisements
  • ‘ದೇವೇಗೌಡರನ್ನು ನೋಡಿದರೆ ನನಗೇ ಅಯ್ಯೋ ಅನಿಸುತ್ತದೆ’
  • ‘ವಿದ್ಯುತ್ ಕಳ್ಳತನ ವಿಚಾರದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಲ್ಲ

ಎಚ್‌ ಡಿ ಕುಮಾರಸ್ವಾಮಿ ಅವರು ದೇವೇಗೌಡರ ಕೊನೆಗಾಲದಲ್ಲಿ ಅವರ ಜಾತಿ ಕೆಡಿಸಿದ್ದಾರೆ. ದೇವೇಗೌಡರು ಜೀವನದ ಉದ್ದಕ್ಕೂ ಕಾಪಾಡಿಕೊಂಡು ಬಂದಿದ್ದ ಮೌಲ್ಯಗಳನ್ನು ಅವರ ಕೊನೆಗಾಲದಲ್ಲಿ ಕುಮಾರಸ್ವಾಮಿ ನಾಶ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಟೀಕಿಸಿದರು.

ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ‌ ಕೆ ಶಿವಕುಮಾರ್ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಹಿರಿಯರಾದ ದೇವೇಗೌಡರಿಗೆ ವಿಧಿಯೇ ಇಲ್ಲದಂತೆ ಕುಮಾರಸ್ವಾಮಿ ಮಾಡಿದ್ದು ನೋಡಿದರೆ, ನನಗೆ ಮಾತುಗಳೇ ಹೊರಡುತ್ತಿಲ್ಲ, ನನಗೇ ಅಯ್ಯೋ ಅನಿಸುತ್ತದೆ. I feel very sorry. ಎನ್‌ಡಿಎ ಸರ್ಕಾರದ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿಗೆ ಒಳ್ಳೆಯದಾಗಲಿ” ಎಂದು ಹೇಳಿದರು.

ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ

Advertisements

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ, “ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ. ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದು ಕುಟುಕಿದರು.

“ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ. ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ

ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ಕೇಳಿದಾಗ, “ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ. ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X