ತಮಿಳುನಾಡಿನಲ್ಲಿ ಭಾರೀ ಮಳೆ; ಶಾಲೆಗಳಿಗೆ ರಜೆ ಘೋಷಣೆ

Date:

Advertisements

ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಹಲವೆಡೆ ತುಂತುರು ಮಳೆಯಾಗುತ್ತಿದೆ.

ಮಂಗಳವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಭಾಗದಲ್ಲಿ ಭಾರೀ ಮಳೆಯಾಗಿದೆ. ಅರಿಯಲೂರು, ತಂಜಾವೂರು, ವಿಲ್ಲುಪುರಂ, ತಿರುವಣ್ಣಾಮಲೈ, ನಾಗಪಟ್ಟಿಣಂ, ತಿರುವರೂರು ಮತ್ತು ಕಡಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisements

ಬುಧವಾರವೂ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಚೆನ್ನೈನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

“121 ಬಹುಪಯೋಗಿ ಸುರಕ್ಷತಾ ಕೇಂದ್ರಗಳು ಸೇರಿದಂತೆ 4,967 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಶಾಲಾ-ಕಾಲೇಜುಗಳು, ಮದುವೆ ಮಂಟಪಗಳು ಮತ್ತು ಸಮುದಾಯ ಭವನಗಳನ್ನು ಪರಿಹಾರ ಕೇಂದ್ರಗಳಾಗಿ ಬಳಸಿಕೊಂಡು, ಜನರಿಗೆ ವಸತಿ ಕಲ್ಪಿಸಲು ಸಿದ್ಧತೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ತಕ್ಷಣ ರಕ್ಷಣಾ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ” ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ.

ಸರ್ಕಾರವು ಚೆನ್ನೈನಲ್ಲಿ 169 ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದೆ ಮತ್ತು 260 ಹೈ-ಪವರ್ ಮೋಟಾರ್ ಪಂಪ್‌ಗಳು ರಕ್ಷಣಾ ಕಾರ್ಯಾಚರಣೆಗಾಗಿ ಸಿದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

ಕಳೆದ ಒಂದೂವರೆ ತಿಂಗಳುಗಳಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದ ಸೃಷ್ಠಿಯಾಗಿತ್ತು. ತಮಿಳುನಾಡಿನಲ್ಲಿ ನೀರಿಲ್ಲವೆಂದು ಅಲ್ಲಿನ ಸರ್ಕಾರ ವಾದಿಸುತ್ತಿತ್ತು.  ತಮಿಳುನಾಡಿಗೆ ನೀರು ಹರಿಸಬೇಕೆಂದು ಪದೇ-ಪದೇ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶಿಸಿತ್ತು. ಇದೀಗ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X