ನಾಮಪತ್ರ ಸಲ್ಲಿಕೆವರೆಗೂ ಮತದಾರರ ಪಟ್ಟಿ ಪರಿಷ್ಕರಿಸಬಹುದು: ಹೈಕೋರ್ಟ್‌

Date:

Advertisements
  • ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ
  • ಶಾಸಕರ ವಿಷಯದಲ್ಲಿ ಚುನಾವಣಾ ಆಯೋಗಕ್ಕೆ ಸೂಚನೆ

ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಿಸಲು ಅವಕಾಶವಿದೆ ಎಂದು ಹೈಕೋರ್ಟ್​ ಹೇಳಿದೆ.

ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದೆ.

“ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದಕ್ಕೆ ಅವಕಾಶವಿದೆ. ಶಾಸಕರ ಹೆಸರನ್ನೇ ಪಟ್ಟಿಯಿಂದ ಕೈಬಿಡುವ ಪ್ರಸಂಗಗಳು ಎದುರಾಗದಂತೆ ಕ್ರಮ ವಹಿಸಬೇಕು” ಎಂದು ನ್ಯಾಯಪೀಠ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

Advertisements

ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 22ರ ಪ್ರಕಾರ ಮತದಾರರ ಪಟ್ಟಿ ನಾಮ ನಿರ್ದೇಶನ ಮಾಡುವುದಕ್ಕಾಗಿ ಕೊನೆಯ ದಿನಾಂಕದವರೆಗೂ ತಿದ್ದುಪಡಿ ಮಾಡುವುದಕ್ಕೆ ಅನುಮತಿ ನೀಡುತ್ತದೆ. ಹೀಗಾಗಿ ಮತದಾರರ ಅಂತಿಮ ಪಟ್ಟಿ ಪ್ರಕಟವಾದ ನಂತರ ಪಟ್ಟಿಯನ್ನು ಮತ್ತಷ್ಟು ಪರಿಷ್ಕರಿಸಲು ಅವಕಾಶವಿಲ್ಲ ಎನ್ನುವ ಅರ್ಜಿದಾರರ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿದೆ.

ಈ ಸುದ್ದಿ ಓದಿದ್ದೀರಾ? ಕನ್ನಡಿಗರೆಲ್ಲ ಒಮ್ಮತದಿಂದ ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂಬ ಪ್ರತಿಜ್ಞೆ ಮಾಡಲಿ: ಸಿದ್ದರಾಮಯ್ಯ

ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಸ್ಥಳಾಂತರಗೊಂಡವರು ಮತ್ತು ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದಕ್ಕೆ ಚುನಾವಣಾ ಆಯೋಗಕ್ಕೆ ಅವಕಾಶವಿದೆ ಎಂದು ಹೇಳಿದೆ.

ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟು ಹೋಗಿರುವ ವ್ಯಕ್ತಿಗಳು ಯಾವ ಸಂದರ್ಭದಲ್ಲಿ ಬೇಕಾದರೂ ತಮ್ಮ ಹೆಸರನ್ನು ನೋಂದಣಿ ಅಧಿಕಾರಿಯ ಮುಂದೆ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ ಎಂದು ಹೈಕೋರ್ಟ್‌ ಹೇಳಿದೆ.

ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇತರ ಕ್ಷೇತ್ರಗಳಲ್ಲಿ ವಾಸಿಸುವ ಮತದಾರರ ಹೆಸರುಗಳು ಸೇರ್ಪಡೆಗೊಂಡಿವೆ ಎಂಬುದಾಗಿ ಈ ಹಿಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.

ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯ ಹೊರಡಿಸಿತ್ತು. ಆಗ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಹೆಸರು ಮತದಾರರ ಪಟ್ಟಿಯಿಂದ ಕಣ್ಮರೆಯಾಗಿತ್ತು. ಇದನ್ನು ಪ್ರಶ್ನಿಸಿ ರಿಜ್ವಾನ್ ಅರ್ಷದ್ ಸೇರಿದಂತೆ ಕ್ಷೇತ್ರದ ಮತದಾರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X