ಬೆಂಗಳೂರು | ಮಹಿಳೆ ಮೇಲೆ ನಾಯಿ ದಾಳಿ; ವಿಚಾರಣೆಗೆ ಹಾಜರಾದ ನಟ ದರ್ಶನ್

Date:

Advertisements

ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಬಂದಿದ್ದರು.

ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಪೊಲೀಸರು ಸ್ಥಳ ಮಹಜರು ಕೂಡ ನಡೆಸಿದ್ದರು.

ಪ್ರಕರಣದ ಎ2 ಆರೋಪಿ ಆಗಿರುವ ದರ್ಶನ್ ಅವರಿಗೆ ಆರ್‌.ಆರ್‌.ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ನಟ ದರ್ಶನ್ ನ.15ರಂದು ತನಿಖಾಧಿಕಾರಿ ಇನ್ಸ್​​ಪೆಕ್ಟರ್ ಶಿವಕುಮಾರ್ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಕೇವಲ 15 ನಿಮಿಷದಲ್ಲಿ ಹೇಳಿಕೆ ನೀಡಿ ದರ್ಶನ್ ಅವರು ಠಾಣೆಯಿಂದ ಹೊರಬಂದರು. ಹೇಳಿಕೆ ಪ್ರತಿಗೆ ಸಹಿ ಹಾಕಿಸಿಕೊಂಡ ಇನ್ಸ್​ಪೆಕ್ಟರ್ ವಿಚಾರಣೆ ಮುಗಿಸಿದರು.

Advertisements

ಆರ್‌.ಆರ್‌.ನಗರ ಠಾಣೆಯ ಬಳಿ ದರ್ಶನ್ ಅವರ ಹಲವಾರು ಅಭಿಮಾನಿಗಳು ನೆರೆದಿದ್ದರು. ದರ್ಶನ್ ಅವರು ಕಾರು ಇಳಿಯುತ್ತಿದ್ದಂತೆಯೇ ಅಭಿಮಾನಿಗಳು ಜೈಕಾರ ಕೂಗಿದರು.

ಏನಿದು ಪ್ರಕರಣ?

ಅಮಿತ ಜಿಂದಾಲ್ ಎನ್ನುವ ಮಹಿಳೆ ಕಾರ್ಯಕ್ರಮವೊಂದಕ್ಕೆ ರಾಜರಾಜೇಶ್ವರಿ ನಗರಕ್ಕೆ ಬಂದಿದ್ದರು. ಈ ವೇಳೆ ಅವರು ನಟ ದರ್ಶನ್ ಅವರ ಮನೆಯ ಬಳಿ ಕಾರು ಪಾರ್ಕಿಂಗ್ ಮಾಡಿದ್ದರು.

ಕಾರ್ಯಕ್ರಮ ಮುಗಿದ ನಂತರ ಕಾರು ತೆಗೆದುಕೊಳ್ಳಲು ಹೋದಾಗ ಅಲ್ಲಿ ದರ್ಶನ್ ಮನೆಯ ನಾಯಿಗಳಿದ್ದವು. ಎರಡು ನಾಯಿಗಳನ್ನು ಕಟ್ಟಿ ಹಾಕಲಾಗಿತ್ತು, ಒಂದು ನಾಯಿಯನ್ನು ಹಾಗೆಯೆ ಬಿಟ್ಟಿದ್ದರು ಎನ್ನಲಾಗಿದೆ. ಆ ನಾಯಿ ಅಮಿತ ಅವರ ಮೇಲೆ ಮೇಲೆ ದಾಳಿ ಮಾಡಿದೆ. ಅದನ್ನು ನೋಡಿದರೂ ದರ್ಶನ್ ಮನೆಯ ಸಿಬ್ಬಂದಿ ಸುಮ್ಮನಿದ್ದರು ಎಂದು ಅವರು ಆರೋಪಿಸಿದ್ದಾರೆ.

ಈ ಸಂಬಂಧ ಅವರು ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ದರ್ಶನ್ ಮನೆಯ ಸಿಬ್ಬಂದಿ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2 ಆರೋಪಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನ. 20 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ‘ಶಂಕರ್‌ನಾಗ್ ನಾಟಕೋತ್ಸವ’

ನಟ ದರ್ಶನ್​ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದರ್ಶನ್​ ಅವರಿಗೆ ಪೊಲೀಸರು ನೋಟಿಸ್​ ನೀಡಿದ್ದರು.

ಇತ್ತೀಚೆಗೆ ನಟ ದರ್ಶನ್ ಅವರು ಹುಲಿ ಉಗುರು ಧರಿಸಿದ್ದ ಹಳೆಯ ಫೋಟೋ ಎಲ್ಲೆಡೆ ವೈರಲ್ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅರಣ್ಯಾಧಿಕಾರಿಗಳು ದರ್ಶನ್ ಅವರ ನಿವಾಸಕ್ಕೆ ತೆರಳಿ ತಪಾಸಣೆ ನಡೆಸಿದ್ದರು. ಈ ಘಟನೆ ಬಳಿಕ ಇದೀಗ ನಾಯಿ ಕಚ್ಚಿದ ಘಟನೆ ನಡೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X