ಕಲ್ಯಾಣ ಕರ್ನಾಟಕದ 7 ಸ್ಮಾರಕಗಳ ಅಭಿವೃದ್ಧಿಗೆ ಖಾಸಗಿ ವ್ಯಕ್ತಿಗಳಿಗೆ ದತ್ತು: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್

Date:

Advertisements

‘ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ’ ಕಾರ್ಯಕ್ರಮದ ಮೊದಲ ಹಂತದ ಕಾರ್ಯಕ್ರಮ ಪೂರ್ಣಗೊಂಡಿದೆ. ಈ ಸ್ಮಾರಕಗಳ ದರ್ಶನ, ಸಂರಕ್ಷಣೆಗಾಗಿ ಪ್ರವಾಸದ ಸಂದರ್ಭದಲ್ಲಿ ಬಸವನಾಡು ಕಲ್ಯಾಣ ಕರ್ನಾಟಕದ ಹಲವು ಸ್ಮಾರಕಗಳನ್ನು ಪರಿಶೀಲನೆ ನಡೆಸಿದ್ದು, ಏಳು ಸ್ಮಾರಕಗಳ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರವಾಸದ ಸಂದರ್ಭದಲ್ಲಿ ಭೇಟಿ ನೀಡಿದ ಬಹುತೇಕ ಸ್ಮಾರಕಗಳ ರಕ್ಷಣೆ ಹಾಗೂ ನಿರ್ವಹಣೆಗೆ ಹಲವಾರು ಸಂಸ್ಥೆಗಳು ಸ್ವಯಂಪ್ರೇರಿತವಾಗಿ ಸರ್ಕಾರದ ದತ್ತು ಯೋಜನೆಗೆ ಸ್ಪಂದಿಸಿವೆ ಎಂದು ತಿಳಿಸಿದರು.

hk patil

ಐತಿಹಾಸಿಕ ಬೀದರ್ ಜಿಲ್ಲೆಯ ನರಸಿಂಹ ಝರಣಾ ದೇಗುಲ ದರ್ಶನದೊಂದಿಗೆ ಆರಂಭವಾದ ಸಚಿವರ ತಂಡದ ಪ್ರವಾಸ ಕಾರ್ಯಕ್ರಮ, ಬೀದರ್‌ನ ಅಷ್ಟಕೋನಾಕಾರದ ಬಾವಿಯ ವೀಕ್ಷಣೆ ಮಾಡಲಾಯಿತು. ಇದಾದ ನಂತರ ಇರಾನ್ ದೇಶದ ಸುರಂಗ ಕಾಲುವೆಗಳನ್ನು ಹೋಲುವ ನೀರಿನ ಕರೇಜ್ (Karez)ನ್ನು ತಂಡ ವೀಕ್ಷಿಸಿತು. ಈ ರೀತಿಯ ನೀರಿನ ಕಾಲುವೆಗಳು ಬೀದರಿನಲ್ಲಿ ವಿಶೇಷ ಎನಿಸಿಕೊಂಡಿವೆ. ನೂರಾರು ವರ್ಷಗಳ ಹಿಂದೆ ನಿರ್ಮಿಸಿರುವ ಈ ಸುರಂಗ ಕಾಲುವೆಗಳನ್ನು ಅಭಿವೃದ್ಧಿ ಪಡಿಸಿ ಸಂರಕ್ಷಿಸುವ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

Advertisements

ಬಸವ ಕಲ್ಯಾಣದಲ್ಲಿ ನಿರ್ಮಾಣ ಹಂತದಲ್ಲಿರುವ ಅನುಭವ ಮಂಟಪಕ್ಕೆ, ಬಸವ ಕಲ್ಯಾಣ ಕೋಟೆಯಲ್ಲಿ ಅಳವಡಿಸಿರುವ ‘ಲೇಸರ್ ಶೋ’ ವೀಕ್ಷಿಸಿ, ಕೋಟೆಯ ದತ್ತು ಪತ್ರವನ್ನು ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವಿತರಿಸಿದ್ದಾರೆ ಎಂದರು.

ಕಲಬುರ್ಗಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರದ್ಧಾ ಕೇಂದ್ರ ನಾಗಾವಿ ಯಲ್ಲಮ್ಮ ದೇವಿ ದೇವಸ್ಥಾನ, ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಮಾನ್ಯಖೇಟಕ್ಕೆ ಭೇಟಿ ಕೊಟ್ಟು ಕೋಟೆಯನ್ನು ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ಕಲ್ಬುರ್ಗಿ ಮೂಲದ ವ್ಯಕ್ತಿಯ ಮಾಲೀಕತ್ವದ ಖಾಸಗಿ ಕಂಪನಿ ಕೃಷ್ಣಕೃಪಾ ಫೌಂಡೇಶನ್‌ಗೆ ವಹಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಯಾದಗಿರಿ ಜಿಲ್ಲೆಯ ಶಿರವಾಳ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿಯ ಶಿಲ್ಪಕಲಾ ವೈಭವವನ್ನು ವೀಕ್ಷಿಸಲಾಯಿತು. ಸ್ಥಳೀಯರ ಮಾಹಿತಿಯಂತೆ ಶಿರವಾಳದಲ್ಲಿ 360 ದೇಗುಲಗಳು, 360 ಬಾವಿಗಳು, ಸಾವಿರಾರು ಲಿಂಗಗಳು ಇರುವ ಪ್ರತೀತಿ ಇದೆ. ‘ನನ್ನಯ್ಯ ನಾದಯ್ಯ’ ಎಂಬ ದೇವಸ್ಥಾನ ಶಿಲ್ಪಕಲೆಯ ವೈವಿಧ್ಯಮಯ ಸಂಸ್ಕೃತಿಯನ್ನು ಹೊರಹೊಮ್ಮಿಸುತ್ತದೆ. ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕಗಳಾದ ಸ್ಮಾರಕಗಳನ್ನು ರಕ್ಷಿಸಲು ಸರ್ಕಾರದೊಂದಿಗೆ ಸಾರ್ವಜನಿಕ ಸಹಭಾಗಿತ್ವ ಅಪೇಕ್ಷಿಸಲಾಗಿದೆ. ಶಹಪುರದ ದಿಡ್ಡಿ ಬಾಗಿಲು ವೀಕ್ಷಿಸಿದ್ದು, ಅದರ ದುರಸ್ತಿಗಾಗಿ ಸೂಕ್ತ ನೆರವು ನೀಡುವ ಭರವಸೆಯನ್ನು ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಸಚಿವರ ತಂಡದಲ್ಲಿದ್ದ ತಜ್ಞರು, ಇತಿಹಾಸಕಾರರು ಮತ್ತು ಆಸಕ್ತರ ತಂಡ ಬೇರೆ ಬೇರೆ ಸ್ಥಳಗಳಿಗೆ ಭೇಟಿ ಕೊಟ್ಟು ರಕ್ಷಣೆ ಇಲ್ಲದ ಕಾರಣದಿಂದ ಅನೇಕ ಶಾಸನಗಳು ನೆಲಕಚ್ಚಿರುವುದು ಕಂಡು ಬಂದಿದೆ. ಯಾದಗಿರಿಯ ಕೋಟೆಗೂ ಭೇಟಿ ನೀಡಿ, ಪರಿಶೀಲಿಸಲಾಗಿದೆ. ಮೂರು ದಿನಗಳ ಮೊದಲನೇ ಹಂತದಲ್ಲಿ ಬೀದರ್, ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ದರ್ಶನ ಪಡೆಯಲಾಯಿತು. ಏಳು ಸ್ಮಾರಕಗಳನ್ನು ಆಸಕ್ತ ಖಾಸಗಿಯವರಿಗೆ ದತ್ತು ಒಪ್ಪಿ, ಪತ್ರ ವಿತರಿಸಲಾಯಿತು. ಈ ಸ್ಮಾರಕಗಳಲ್ಲಿ ಸ್ವಚ್ಛತೆ, ಮೂಲಭೂತ ಸೌಲಭ್ಯ ಹಾಗೂ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಮತ್ತು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X