ಕೊಡಗು | ಆಯಾ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನೂ ನೇರಪಾವತಿಗೆ ಒಳಪಡಿಸುವಂತೆ ಆಗ್ರಹ

Date:

Advertisements

ಕಾಂಗ್ರೆಸ್ ಪ್ರಣಾಳಿಕೆಯ ಘೋಷಣೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನುಡಿದಂತೆ ನಡೆಯಿರಿ ಎಂಬ ಘೋಷಣೆಯಡಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ನವೆಂಬರ್‌ 15ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ನಡೆಸಿದರು.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹೊರಗುತ್ತಿಗೆ ನೌಕರರು ಮಾತನಾಡಿ, “ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರ್ಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು. ನೀರುಸರಬರಾಜು ಸಹಾಯಕರು ಲೋಡರ್ಸ್, ಕ್ಲೀನರ್ಸ್ ಯೂಜಿಡಿ ಕಾರ್ಮಿಕರು ಸೇರಿದಂತೆ 15 ಸಾವಿರಕ್ಕು ಅಧಿಕ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಗಿದೆ. ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ” ಎಂದರು.

“2017ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. 1964ರ ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯೂಜಿಡಿ ಕಾರ್ಮಿಕರನ್ನೂ ಪೌರಕಾರ್ಮಿಕರೆಂದು ಗುರುತಿಸಲಾಗಿದೆ. ಆದರೂ ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿ ನೇರನೇಮಕಾತಿ ಹಾಗೂ ನೇರಪಾವತಿಯಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಎಸಗಲಾಯಿತು. ಈಗಲೂ ಕೂಡ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರ್ಕಾರದ ನೀತಿ ಒಂದು‌ ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಶೋಭೆಯಲ್ಲ. ಕಳೆದ ಸರ್ಕಾರದಲ್ಲಿ ತೀವ್ರ ಹೋರಾಟದ ಪರಿಣಾಮ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿ ಕಡತ ಹಣಕಾಸು ಇಲಾಖೆಯ ಪರೀಶೀಲನೆಯಲ್ಲಿರುವಾಗಲೆ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾದವು (ಕಡತ ಸಂಖ್ಯೆ :UDD/11/GEL/2023)(UDD/GEL/137-22) ಈ ಸಂಬಂದ ಕಡತವನ್ನು ಸಂಪುಟದಲ್ಲಿ ಅಂಗೀಕರಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ‘ವಧು ಭಾಗ್ಯʼಕ್ಕೆ ಒತ್ತಾಯ; ಆದಿಚುಂಚನಗಿರಿಗೆ ಯುವಕರ ಪಾದಯಾತ್ರೆ

“ಕಳೆದ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಬೇಕು. ಘನ ತ್ಯಾಜ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್ ಹೆಲ್ಪರ್ಸ್, ಯೂಜಿಡಿ ಕಾರ್ಮಿಕರು, ಸ್ಯಾನಿಟರಿ ಸೂಪರ್ ವೈಸರ್‌ಗಳನ್ನು ಏಕಕಾಲಕ್ಕೆ ಗುತ್ತಿಗೆ ಪದ್ಧತಿ ಬದಲು ನೇರಪಾವತಿಗೆ ತರಬೇಕು. 1964ರ ಪೌರಾಡಳಿತ ಕಾಯ್ದೆ ಪ್ರಕಾರ ಇವರನ್ನು ಪೌರಕಾರ್ಮಿಕರೆಂದು ಒಪ್ಪಿರುವುದರಿಂದ ಹಾಲಿ ನೇಮಕಾತಿಯಲ್ಲಿ ಇವರಿಗೂ ಅವಕಾಶ ಕಲ್ಪಿಸಬೇಕು. ನೀರು ಸರಬರಾಜು ಸಹಾಯಕರು ಬೀದಿದೀಪ ನಿರ್ವಾಹಕರು ಸ್ಮಶಾನ ಕಾವಲುಗಾರರನ್ನು ಏಕಕಾಲಕ್ಕೆ ನೇರಪಾವತಿಗೆ ತಂದು ಖಾಯಂಗೊಳಿಸಬೇಕು” ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಸೇರಿದಂತೆ ಬಹುತೇಕ ಕಾರ್ಮುಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X