ಬೀದರ್ | ಡಿ.2ರಂದು ಭೀಮಣ್ಣ ಖಂಡ್ರೆ ಶತಮಾನೋತ್ಸವ

Date:

Advertisements

ನೂರು ವಸಂತಗಳನ್ನು ಪೂರೈಸಿರುವ ಈ ಭಾಗದ ಸ್ವಾತಂತ್ರ ಹೋರಾಟಗಾರರು, ಲಿಂಗಾಯತ ಸಮಾಜದ ನಾಯಕರು, ರಾಜಕೀಯ ಮುತ್ಸದ್ದಿ, ಹಿರಿಯ ಚೇತನ, ಲೋಕನಾಯಕರು ಆಗಿರುವ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಜಾತಿಭೇದ ಮರೆತು ಎಲ್ಲ ವರ್ಗದವರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

“ಡಿಸೆಂಬರ್‌ 2ರಂದು ಇಲ್ಲಿಯ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ(ಬಿಕೆಐಟಿ) ಆವರಣದಲ್ಲಿ ಜರುಗಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ನಾಡಿನ ಮಠಾಧೀಶರು, ರಾಜಕೀಯ ಮುಖಂಡರು, ಹಿರಿಯ ಸಾಹಿತಿಗಳು ಸಾಕ್ಷಿಯಾಗಲಿದ್ದಾರೆ” ಎಂದರು.

Advertisements

“ಡಾ.ಭೀಮಣ್ಣ ಖಂಡ್ರೆ ಈ ನಾಡು ಕಂಡ ಅಪರೂಪದ ವ್ಯಕ್ತಿ. ಎಂದಿಗೂ ಜಾತಿ ರಾಜಕಾರಣ ಮಾಡಿದವರಲ್ಲ. ತಮ್ಮ ತತ್ವ ಸಿದ್ಧಾಂತಕ್ಕೆ ಎಂದಿಗೂ ರಾಜಿ ಆಗಲಿಲ್ಲ. ಹಿಡಿದ ಕೆಲಸ ಪೂರ್ಣಗೊಳ್ಳುವವರೆಗೂ ವಿರಮಿಸಿದವರಲ್ಲ. ನೇರ, ನಿಷ್ಠೂರ ವ್ಯಕ್ತಿತ್ವ ಅವರದ್ದಾಗಿತ್ತು” ಎಂದರು.

“ಈ ಭಾಗದ ಅಭಿವೃದ್ಧಿಗೆ ಅವಿರತ ಶ್ರಮಿಸಿದ ಅವರು ಹಿಂದೊಮ್ಮೆ ಬರಗಾಲದ ಸಂದರ್ಭದಲ್ಲಿ ಬಿತ್ತನೆ ಬೀಜದ ಲಭ್ಯತೆ ಇದ್ದರೂ ಕೂಡ ಸರ್ಕಾರ ರೈತರಿಗೆ ವಿತರಣೆ ಮಾಡಿರಲಿಲ್ಲ. ಆ ಸಂದರ್ಭದಲ್ಲಿ ಸ್ವಪಕ್ಷದವರನ್ನು ಎದುರು ಹಾಕಿಕೊಂಡು ಗೋದಾಮು ಕೀಲಿ ಮುರಿದು ಬೀಜ ವಿತರಿಸಿ ರೈತಪರ ಕಾಳಜಿ ಮೆರೆದಿದ್ದರು” ಎಂದು ನೆನಪಿಸಿದರು.

“ಸರ್ಕಾರದಿಂದ ಪುರುಷರ ಫ್ಯಾಮಿಲಿ ಪ್ಲ್ಯಾನಿಂಗ್ ಯೋಜನೆ ರೂಪಿಸಿದ ಸಂದರ್ಭದಲ್ಲಿ ರಾಜ್ಯದಲ್ಲೇ ದಾಖಲೆ ರೀತಿಯಲ್ಲಿ ತಾಲೂಕಿನಲ್ಲಿ ಪುರುಷರ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರು. ಜಿಲ್ಲೆಯ ರೈತರ ಅನುಕೂಲಕ್ಕೆ ಸಕ್ಕರೆ ಕಾರ್ಖಾನೆ ಸ್ಥಾಪನೆ, ಶೈಕ್ಷಣಿಕ ಕೇಂದ್ರ ಸೇರಿದಂತೆ ಮುಂತಾದ ಅಭಿವೃದ್ಧಿ ಕೆಲಸ ಕೈಗೊಂಡು ಈ ಭಾಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದರು” ಎಂದರು.

“ಇಂತಹ ವ್ಯಕ್ತಿಗಳು ರಾಜಕೀಯ ಕ್ಷೇತ್ರದಲ್ಲಿ ಸಿಗುವುದು ಅಪರೂಪ. ಅವರ ವ್ಯಕ್ತಿತ್ವವನ್ನು ಬೇರೆಯವರ ಜತೆಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅವರಿಗೆ ಅವರೇ ಸಾಟಿ ಎಂದರು. ಡಾ.ಚನ್ನಬಸವ ಪಟ್ಟದ್ದೇವರು ಮತ್ತು ಡಾ.ಭೀಮಣ್ಣ ಖಂಡ್ರೆ ಅವರ ಗುರುಶಿಷ್ಯರ ಸಂಬಂಧ ಶ್ರೇಷ್ಠವಾಗಿತ್ತು. ಡಾ.ಚನ್ನಬಸವ ಪಟ್ಟದ್ದೇವರು ನೂರು ವಸಂತಗಳನ್ನು ಪೂರೈಸಿದ ಸಂದರ್ಭದಲ್ಲಿ ಡಾ.ಭೀಮಣ್ಣ ಖಂಡ್ರೆ ಎದುರು ನಿಂತು ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶತಮಾನೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಿದ್ದು ಇತಿಹಾಸ” ಎಂದರು.

“ಯೋಗಾಯೋಗ ಎಂಬಂತೆ ಪಟ್ಟದ್ದೇವರ ಆಪ್ತ ಶಿಷ್ಯರು ಆಗಿರುವ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಕೂಡ ಇದೀಗ ಅದೇ ನೆಲದಲ್ಲಿ ನಡೆಯುತ್ತಿರುವುದು ಅತೀವ ಸಂತಸ ತಂದಿದೆ.
ಈ ಅಪರೂಪದ ಸಮಾರಂಭ ನಮ್ಮೆಲ್ಲರಿಗೂ ಕಣ್ತುಂಬಿಕೊಳ್ಳಲು ಸದಾವಕಾಶ ಸಿಕ್ಕಿದೆ. ಹಾಗಾಗಿ ಡಾ.ಭೀಮಣ್ಣ ಖಂಡ್ರೆ ಅಭಿಮಾನಿಗಳು, ಶ್ರೀಮಠದ ಭಕ್ತರು, ಸಾರ್ವಜನಿಕರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಈ ಶತಮಾನೋತ್ಸವ ಸಮಾರಂಭ ಇತಿಹಾಸ ಪುಟದಲ್ಲಿ ಸೇರುವಂತೆ ಮಾಡಬೇಕು” ಎಂದು ತಿಳಿಸಿದರು.

ಭಾಲ್ಕಿ ಹಿರೇಮಠ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಹಿರೇಮಠ ಸಂಸ್ಥಾನಕ್ಕೂ ಮತ್ತು ಖಂಡ್ರೆ ಮನೆತನಕ್ಕೂ ಹಿಂದಿನಿಂದಲೂ ಅನ್ಯೋನ್ಯ ಸಂಬಂಧ ಇದೆ. ಡಾ.ಚನ್ನಬಸವ ಪಟ್ಟದ್ದೇವರ ಬಗ್ಗೆ ಡಾ.ಭೀಮಣ್ಣ ಖಂಡ್ರೆ ಅವರಿಗೆ ಅಪಾರ ಗೌರವ, ಭಕ್ತಿ ಸಂಬಂಧ ಇತ್ತು. ಶ್ರೀಗಳ ವಿಶ್ವಾಸಕ್ಕೆ ತಕ್ಕಂತೆ ಅವರು ಕೆಲಸ ಮಾಡಿದ್ದರು. ಆ ಕಾರಣಕ್ಕಾಗಿಯೇ ಡಾ.ಭೀಮಣ್ಣ ಖಂಡ್ರೆ ವ್ಯಕ್ತಿತ್ವ ಕಂಡು ಅವರಿಗೆ ಲೋಕನಾಯಕ ಎಂಬ ಬಿರುದು ನೀಡಿದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ತೆರೆ; 6 ಕೋಟಿಗೂ ಅಧಿಕ ಆದಾಯ ಸಂಗ್ರಹ

“ಶ್ರೀಗಳ ಆಶೀರ್ವಾದದಿಂದ ಡಾ.ಭೀಮಣ್ಣ ಖಂಡ್ರೆ ರಾಜಕೀಯ ರಂಗದಲ್ಲಿ ಯಶಸ್ಸು ಕಂಡು ಈ ಭಾಗಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ. ನೂರು ವಸಂತಗಳ ಸಂಭ್ರಮದಲ್ಲಿರುವ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಅರ್ಥಪೂರ್ಣವಾಗಿ ಜರುಗುತ್ತಿದ್ದು ಜಿಲ್ಲೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸಮಾರಂಭಕ್ಕೆ ಸಾಕ್ಷಿಯಾಗಬೇಕು” ಎಂದು ತಿಳಿಸಿದರು.

ಈ ವೇಳೆ ಮಹಾಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X