ತಂತ್ರಜ್ಞಾನ ಬೆಂಕಿಯಂತೆ, ಅಡುಗೆಯೂ ಆಗುತ್ತೆ, ಮನೆಯೂ ಸುಡುತ್ತೆ: ಸಿಎಂ ಮಾಧ್ಯಮ ಕಾರ್ಯದರ್ಶಿ ಪ್ರಭಾಕರ್

Date:

Advertisements

ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆಯ(ಎಐ) ಕಾಲಘಟ್ಟದಲ್ಲಿ ಮಾಧ್ಯಮಗಳು” ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿಗೆ ರಶ್ಮಿಕಾ ಮಂದಣ್ಣ ಮತ್ತು ಕತ್ರಿನಾ ಕೈಫ್ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿತ್ತು. ಅದು ಫೇಕ್ ಎಂದು ಗೊತ್ತಾಗುವುದರೊಳಗೆ ಅದನ್ನು ಲಕ್ಷಾಂತರ ಮಂದಿ ಅಸಲಿ ಎಂದೇ ನಂಬಿ ಬಿಟ್ಟಿದ್ದರು. ರಶ್ಮಿಕಾ ಅವರ ಬದಲಿಗೆ ಯಾವುದೋ ಧಾರ್ಮಿಕ ನಾಯಕರ, ರಾಜಕೀಯ ನಾಯಕರ ಡೀಪ್ ಫೇಕ್ ವಿಡಿಯೊ ಹಾಕಿ ನಕಲಿ ಸಂದೇಶ ಕೊಟ್ಟಿದ್ದರೆ ಅದು ನಕಲಿ ಎಂದು ಗೊತ್ತಾಗುವುದರೊಳಗೆ ಭಾರೀ ಅನಾಹುತಗಳನ್ನು ಮಾಡಿ ಬಿಡುತ್ತಿತ್ತು. ಹೀಗಾಗಿ ಯಾವುದೇ ತಂತ್ರಜ್ಞಾನವಿರಲಿ, ಅದನ್ನು ಯಾರು ಬಳಸುತ್ತಾರೆ, ಹೇಗೆ ಎನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ ಎಂದರು.

Advertisements

321 2

ಪತ್ರಿಕೋದ್ಯಮ ತನ್ನ ವೇಗದಲ್ಲಿ ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ವ್ಯತ್ಯಾಸವನ್ನೇ ಅಳಿಸಿ ಬಿಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈಗ ಪತ್ರಿಕೋದ್ಯಮದಲ್ಲಿ ಊಹಾಪೋಹದ ಪತ್ರಿಕೋದ್ಯಮ ಎನ್ನುವ ಅನಾಹುತಕಾರಿ ಬೆಳವಣಿಗೆ ಶುರುವಾಗಿದೆ. ಈ ಊಹೆಗೆ ಮಿತಿಯೇ ಇಲ್ಲ. ಕಣ್ಣ ಮುಂದಿರುವ ಸತ್ಯವನ್ನು ತನಗೆ ಬೇಕಾದಂತೆ ಊಹಾ ಪತ್ರಿಕೋದ್ಯಮ ಚಿತ್ರಿಸುತ್ತಿದೆ ಎಂದು ಪ್ರಭಾಕರ್ ಕಳವಳ ವ್ಯಕ್ತಪಡಿಸಿದರು.

ನಿತ್ಯದ ಅಗತ್ಯ ವಸ್ತು ಸಂಗತಿಗಳಲ್ಲಿ ಪತ್ರಿಕೆಗಳೂ ಸೇರಿವೆ. ಪತ್ರಿಕೆಗಳ ವಿಶ್ವಾಸಾರ್ಹತೆ ಉಳಿದ ಮಾಧ್ಯಮಗಳಿಗಿಂತ ಹೆಚ್ಚಾಗಿದೆ. ಹೀಗಾಗಿ ಇತರೆ ಯಾವುದೇ ಮೂಲದಿಂದ ಸುದ್ದಿ ಬಂದರೂ ಅದರ ಸತ್ಯಾಸತ್ಯತೆಗೆ ಜನ ಪತ್ರಿಕೆಗಳ ಮೇಲೆ ಅವಲಂಬಿತರಾಗಿದ್ದಾರೆ. ಸಮಾಜ ಮತ್ತು ಸರ್ಕಾರದ ನಡುವೆ ಪತ್ರಿಕೆಗಳು ಸೇತುವೆ ಇದ್ದಂತೆ ಎಂದು ಅಭಿಪ್ರಾಯಪಟ್ಟರು.

ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ವಿಜ್ಞಾನ ಬರಹಗಾರರಾದ ನಾಗೇಶ್ ಹೆಗ್ಡೆ, ತಂತ್ರಜ್ಞಾನ ವಿಶ್ಲೇಷಕ ಶ್ರೀನಿಧಿ ಮತ್ತು ಕಾವ್ಯಶ್ರೀ, ಮಾಧ್ಯಮ‌ ಅಕಾಡೆಮಿ ಕಾರ್ಯದರ್ಶಿ ರೂಪಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X