ಹುಬ್ಬಳ್ಳಿ | ವಾಯವ್ಯ ಸಾರಿಗೆಯಲ್ಲಿ ಯುಪಿಐನಿಂದ ಹಣ ಪಾವತಿಸುವ ವ್ಯವಸ್ಥೆ

Date:

Advertisements

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸುವ ವ್ಯವಸ್ಥೆ ಮಾಡಲಾಗಿದ್ದು, ಈ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.

ವಾಯವ್ಯ ಸಾರಿಗೆ ಬಸ್​ಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೀಘ್ರದಲ್ಲಿಯೇ ನಿಗಮದ ಎಲ್ಲ ಬಸ್‌ಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯ ಎಂಡಿ ಭರತ್ ಎಸ್. ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನವೆಂಬರ್​​ 1ರಿಂದ ಫೋನ್ ಪೇ ಕಂಪನಿಯ ಸಹಯೋಗದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಆರಂಭಿಸಲಾಗಿತ್ತು. ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಸೇರಿದಂತೆ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಿದೆ, ನಗದು ರಹಿತ ಪ್ರಯಾಣ ಮತ್ತಿತರ ಪ್ರಯೋಜನಗಳಿಂದಾಗಿ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿದೆ ಎನ್ನುತ್ತಿದ್ದಾರೆ ಅಧಿಕಾರಿಗಳು.

Advertisements

ಪೈಲಟ್ ಯೋಜನೆಯಡಿಯಲ್ಲಿ, ಪ್ರತಿ ಕಂಡಕ್ಟರ್‌ಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂಆರ್ ಕೋಡ್ ನೀಡಲಾಗಿದೆ. ಮತ್ತು ಅವರ ಟಿಕೆಟಿಂಗ್ ಯಂತ್ರಗಳನ್ನು ಅದಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಕಂಡಕ್ಟರ್ ಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಪ್ರಯಾಣಿಕರು ಫೋನ್‌ಪೇ, ಗೂಗಲ್ ಪೇ ಅಥವಾ ಇತರ ಯುಪಿಐ ಅಪ್ಲಿಕೇಶನ್‌ಗಳ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿಸುತ್ತಿದ್ದಾರೆ ಎಂದು ಎಂಡಿ ಭರತ್ ಅವರು ವಿವರಿಸಿದ್ದಾರೆ.

ಇಲ್ಲಿಯವರೆಗೆ, 27,498 ಯುಪಿಐ ವಹಿವಾಟುಗಳು ನಡೆದಿವೆ ಮತ್ತು 71 ಲಕ್ಷ ರೂ. ಹಣ ಆನ್​ಲೈನ್ ಮೂಲಕ ಬಂದಿದೆ. ಮತ್ತೊಂದೆಡೆ ಈ ವ್ಯವಸ್ಥೆಯಿಂದ ಚಿಲ್ಲರೆ ಸಮಸ್ಯೆ ಬಗೆಹರಿದಿದೆ ಎಂದು ಸಾರಿಗೆ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ವಾಯವ್ಯ ಸಾರಿಗೆಯ ಎಲ್ಲಾ 4,581ಬಸ್‌ಗಳಿಗೆ ಯುಪಿಐ ಪಾವತಿ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಬಸ್‌ಗಳಲ್ಲಿ ಚಿಲ್ಲರೆಗಾಗಿ ಹೊಡೆದಾಟ-ಬಡಿದಾಟ, ಅಥವಾ ಚಿಲ್ಲರೆ ಇಲ್ಲ ಎಂದು ಬಸ್​ನಿಂದ ಇಳಿಸುವುದು, ಟಿಕೆಟ್ ನೀಡಿದ ಬಳಿಕ ಚಿಲ್ಲರೆ ಇಲ್ಲ ಎಂದು ಪ್ರಯಾಣಿಕರಿಗೆ ಚಿಲ್ಲರೆ ನೀಡದೆ ಮರೆಯುವಂತಹ ಅನೇಕ ಘಟನೆಗಳು ಪ್ರತಿ ದಿನ ನಡೆಯುತ್ತಿದ್ದವು. ಸದ್ಯ ಈಗ ಸಾರಿಗೆ ಇಲಾಖೆಯ ಈ ಮಹತ್ವದ ಹೆಜ್ಜೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ ಎನ್ನುವುದು ಇಲಾಖೆಯ ಅಭಿಪ್ರಾಯ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X