ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧದ ಆರೋಪ; ವರದಿ ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚನೆ

Date:

Advertisements

61.32 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ಅಕ್ರಮವಾಗಿ ಮಾರ್ಪಡಿಸಿದ ಕುರಿತು ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕರ್ನಾಟಕ ಅರಣ್ಯ ಇಲಾಖೆಗೆ ಸೂಚಿಸಿದೆ.

ಈ ಸಂಬಂಧ ನವೆಂಬರ್‌ 6ರಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಿಗೆ (ಪಿಸಿಸಿಎಫ್‌) ಅವರಿಗೆ ಪತ್ರ ಬರೆದಿರುವ ಸಚಿವಾಲಯದ ಉಪ ಮಹಾನಿರೀಕ್ಷಕ ಎಂ ಕೆ ಶಂಭು, “ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಹಾಗೂ ಭೂ ಅಕ್ರಮದ ಬಗ್ಗೆ ಹಾಸನದ ಡಿಸಿಎಫ್‌ ವರದಿ ನೀಡಿದ್ದಾರೆ. ಈ ಸಂಬಂಧ ಒಂದು ತಿಂಗಳ ಒಳಗೆ ವಾಸ್ತವಾಂಶದ ವರದಿ ಸಲ್ಲಿಸಬೇಕು. ಇಲ್ಲದಿದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಈ ಅಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ 2022ರ ಮಾರ್ಚ್‌ 4ರಂದು ಸಚಿವಾಲಯ ಸೂಚಿಸಿತ್ತು. ಆದರೆ, ಅರಣ್ಯ ಇಲಾಖೆ ಯಾವುದೇ ವರದಿ ಸಲ್ಲಿಸಿರಲಿಲ್ಲ. ಮತ್ತೊಮ್ಮೆ ಜ್ಞಾ‍ಪನಾ ಪತ್ರವನ್ನೂ ಕಳುಹಿಸಲಾಗಿತ್ತು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್‌ಐಆರ್ ದಾಖಲು

ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿದ ಈ ಪ್ರಕರಣವನ್ನು ಹಾಸನದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ಅರಣ್ಯ ಸಂಚಾರಿ ದಳ) ಕಾರ್ಯನಿರ್ವಹಿಸುತ್ತಿದ್ದ ಎನ್‌ ರವೀಂದ್ರ ಕುಮಾರ್ ಅವರು 2022ರ ಫೆಬ್ರುವರಿಯಲ್ಲಿ ಪತ್ತೆ ಹಚ್ಚಿದ್ದರು. ಹಾಸನದ ತ್ಯಾವಿಹಳ್ಳಿಯ ಸರ್ವೇ ನಂಬರ್ 22ರಲ್ಲಿ ಹರಡಿರುವ 61.32 ಎಕರೆ ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

Download Eedina App Android / iOS

X