ಚಾಮರಾಜನಗರ | ಆದಿವಾಸಿಗಳ ಮನೆ ಬಾಗಿಲಿಗೆ ಸರ್ಕಾರ ಎಲ್ಲ ಸೌಕರ್ಯ ತಲುಪಿಸಲಿದೆ: ಸಚಿವ ಬಿ ನಾಗೇಂದ್ರ

Date:

Advertisements

ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆದಿವಾಸಿಗಳ ಮನೆ ಬಾಗಿಲಿಗೆ ಎಲ್ಲ ಸೌಕರ್ಯಗಳನ್ನು ಹಂತ ಹಂತವಾಗಿ ಸರ್ಕಾರ ತಲುಪಿಸಲಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಬುಧವಾರ ಹೇಳಿದರು.

ಚಾಮರಾಜನಗರದ ಡಾ.ಬಿ ಆರ್‌ ಅಂಬೇಡ್ಕರ್‌ ಭವನದಲ್ಲಿ ನಡೆದ ರಾಜ್ಯ ಮಟ್ಟದ ಭಗವಾನ್‌ ಬಿರ್ಸಾಮುಂಡ ಜಯಂತಿ ಹಾಗೂ ಜನಜಾತೀಯ ಗೌರವ್ ದಿವಸ್‌–2023 ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬುಡಕಟ್ಟು ಸಮುದಾಯದವರಿಗೆ ವಾರ್ಷಿಕವಾಗಿ ಕೇವಲ ಆರು ತಿಂಗಳು ಪೌಷ್ಟಿಕ ಆಹಾರ ಪೂರೈಸಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಇದನ್ನು 12 ತಿಂಗಳುಗಳಿಗೆ ವಿಸ್ತರಿಸಬೇಕೆಂದು ಮನವಿ ಮಾಡಿದ ಕೂಡಲೇ ಅವರು ಒಪ್ಪಿಕೊಂಡರು. ನಮ್ಮ ಸರ್ಕಾರವು 12 ತಿಂಗಳಲ್ಲೂ ಪೌಷ್ಟಿಕ ಆಹಾರವನ್ನು ಆದಿವಾಸಿಗಳ ಮನೆ ಬಾಗಿಲಿಗೆ ತಲುಪಿಸಲಿದೆ” ಎಂದು ಹೇಳಿದರು.

Advertisements

“ಬುಡಕಟ್ಟು ಸಮುದಾಯದವರು ಮುಖ್ಯವಾಹಿನಿಗೆ ಬರಬೇಕು. ಸರ್ಕಾರ ನಿಮ್ಮ ಜೊತೆಗೆ ಇದೆ. ಆದಿವಾಸಿಗಳು ದೊಡ್ಡ ಸಂಖ್ಯೆಯಲ್ಲಿ ವಿದ್ಯಾವಂತರಾಗಬೇಕು. ಕೇಂದ್ರ ಸರ್ಕಾರದಿಂದ ಅನುದಾನ ಬರುತ್ತಿದೆ. ರಾಜ್ಯ ಸರ್ಕಾರವೂ ಯೋಜನೆಗಳನ್ನು ಹಾಕಿಕೊಂಡಿದೆ. ಎಲ್ಲವನ್ನೂ ಸದ್ಬಳಕೆ ಮಾಡಿಕೊಂಡು ಆರೋಗ್ಯವಾಗಿ, ಆರ್ಥಿಕವಾಗಿ ಸಶಕ್ತರಾಗಬೇಕು” ಎಂದು ಹೇಳಿದರು.

ಬಿರ್ಸಾಮುಂಡ ತನ್ನ ಚಿಕ್ಕವಯಸ್ಸಿನಲ್ಲೇ ಬ್ರಿಟಿಷರ ವಿರುದ್ಧ ಮಾಡಿರುವ ಹೋರಾಟವನ್ನು ಸಚಿವರು ಸ್ಮರಿಸಿದರು.

ಹಾಡಿಗಳಿಗೆ ಸೌಕರ್ಯ

ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್‌ ಮಾತನಾಡಿ, “ಜಿಲ್ಲೆಯ ಹಾಡಿಗಳಲ್ಲಿ ಅದರಲ್ಲೂ ವಿಶೇಷವಾಗಿ ಹನೂರು ತಾಲೂಕಿನ ಹಲವು ಹಾಡಿಗಳಿಗೆ ರಸ್ತೆ ಸಂಪರ್ಕ ಇಲ್ಲ, ವಿದ್ಯುತ್‌ ಸೌಲಭ್ಯ ಇಲ್ಲವೆಂಬ ದೂರುಗಳು ಇದ್ದವು. ನಾನು ಖುದ್ದಾಗಿ ಹಾಡಿಗೆ ಭೇಟಿ ನೀಡಿ ಜನರೊಂದಿಗೆ ಮಾತನಾಡಿದ್ದೇನೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಾಡಿಗಳಿಗೆ ರಸ್ತೆ ಹಾಗೂ ವಿದ್ಯುತ್‌ ಸೌಲಭ್ಯ ಕಲ್ಪಿಸಲು ಸೂಚಿಸಿದ್ದಾರೆ. ಆ ಕೆಲಸ ನಡೆಯುತ್ತಿದೆ” ಎಂದರು.

“ತಮಗೆ ಮನೆಗಳು ಬೇಕೆಂದು ಹಾಡಿಯ ನಿವಾಸಿಗಳು ಮನವಿ ಮಾಡಿದ್ದರು. ಎಷ್ಟು ಕುಟುಂಬಗಳಿಗೆ ಮನೆಗಳು ಅಗತ್ಯವಿದೆ ಎಂದು ಪಟ್ಟಿಮಾಡಲು ಸೂಚಿಸಿದ್ದೆ. 2,500 ಮನೆಗಳು ಬೇಕೆಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಹಂತ ಹಂತವಾಗಿ ಮನೆ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದಾರೆ” ಎಂದರು.

ಬುಡಕಟ್ಟು ಸಮುದಾಯದ ಮುಖಂಡ ಸಿ.ಮಾದೇಗೌಡ ಮಾತನಾಡಿ, “ಮಲೆ ಮಹದೇಶ್ವರ ವನ್ಯಧಾಮವನ್ನು ʼಹುಲಿ ಸಂರಕ್ಷಿತ ಪ್ರದೇಶʼವೆಂದು ಘೋಷಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ವಿರೋಧಿಸಿ ನಾವು ಈಗಾಗಲೇ ಎರಡು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಈಗಾಗಲೇ ಎರಡು ಹುಲಿ ಸಂರಕ್ಷಿತ ಪ್ರದೇಶಗಳಿಂದಾಗಿ ಬುಡಕಟ್ಟು ಸಮುದಾಯದವರು ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಮಲೆ ಮಹದೇಶ್ವರ ವನ್ಯಧಾಮವನ್ನೂ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಿದರೆ ಮತ್ತೆ ಕಷ್ಟ ಅನುಭವಿಸಬೇಕಾಗುತ್ತದೆ. ಮಹದೇಶ್ವರ ಸ್ವಾಮಿಯ ಭಕ್ತರಿಗೂ ತೊಂದರೆಯಾಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಹುಲಿ ಯೋಜನೆ ಘೋಷಿಸಬಾರದು. ಅದು ವನ್ಯಧಾಮವಾಗಿಯೇ ಇರಬೇಕು” ಎಂದು ಒತ್ತಾಯಿಸಿದರು.

“ಬಂಡೀಪುರ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸಮರ್ಪಕವಾಗಿ ಆಗಿಲ್ಲ. ಆದಿವಾಸಿಗಳು ಸಲ್ಲಿಸಿರುವ ಅರ್ಜಿಗಳು ಇನ್ನೂ ಇತ್ಯರ್ಥವಾಗದೇ ಉಳಿದಿವೆ. ಸರ್ಕಾರ ಶೀಘ್ರವಾಗಿ ಬುಡಕಟ್ಟು ಜನರಿಗೆ ಭೂಮಿ ನೀಡಬೇಕು” ಎಂದು ಆಗ್ರಹಿಸಿದರು.

ಶಾಸಕ ಸಿ ಪುಟ್ಟರಂಗಶೆಟ್ಟಿ ಮಾತನಾಡಿ, “ಆದಿವಾಸಿಗಳಿಗೆ ಶಿಕ್ಷಣ ಕೊಡಿಸಲು ಸರ್ಕಾರ ಆಶ್ರಮ ಶಾಲೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಈವರೆಗೆ ಎಲ್ಲರೂ ಶಿಕ್ಷಣ ಪಡೆಯುತ್ತಿಲ್ಲ. ಜಿಲ್ಲೆಯಲ್ಲಿ ಬಿಳಿಗಿರಿರಂಗನ ಬೆಟ್ಟದಲ್ಲಿ ವಿಜಿಕೆಕೆಯ ಕಾರಣಕ್ಕೆ ಬುಡಕಟ್ಟು ಜನರು ಸ್ವಲ್ಪ ಶಿಕ್ಷಣ ಪಡೆದಿದ್ದಾರೆ. ಆದರೆ ಉಳಿದ ಕಡೆಗಳಲ್ಲಿ ಶಿಕ್ಷಣ ಪಡೆಯುತ್ತಿಲ್ಲ” ಎಂದು ಹೇಳಿದರು.

“ಬುಡಕಟ್ಟು ಮಕ್ಕಳು ಮದ್ಯಕ್ಕೆ ದಾಸರಾಗುತ್ತಿದ್ದು, ಅವರಿಗೆ ಮದ್ಯ ಸಿಗದಂತೆ ಜಿಲ್ಲಾಡಳಿತ ಮಾಡಬೇಕಾಗಿದೆ. ಹಾಸ್ಟೆಲ್‌ನಲ್ಲಿ ಇರಿಸಿ ಓದಿಸಿದರೂ ಕೆಲವೇ ದಿನಗಳಲ್ಲಿ ತಪ್ಪಿಸಿಕೊಂಡು ಮನೆಗೆ ಹೋಗುತ್ತಿದ್ದಾರೆ. ಅರಣ್ಯ ಇಲಾಖೆ ಆದಿವಾಸಿಗಳನ್ನು ನಿರಂತರವಾಗಿ ಶೋಷಣೆ ಮಾಡುತ್ತಿದೆ. ಹಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಬಿಡುತ್ತಿಲ್ಲ” ಎಂದು ದೂರಿದ್ದು, “ಆದಿವಾಸಿಗಳಿಗೆ ಜಮೀನು ಕೊಡಿಸುವುದಕ್ಕೆ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕೆಲಸ ಮಾಡಬೇಕು” ಎಂದು ಸಲಹೆ ನೀಡಿದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾತಂಡಗಳೊಂದಿಗೆ ಬಿರ್ಸಾಮುಂಡ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು. ಗೊರವರ ಕುಣಿತ ಪಿನಾಸಿ ನೃತ್ಯ ಡೊಳ್ಳು ಕುಣಿತ ಬೊಂಬೆಗಳ ಕುಣಿತ ಢಕ್ಕೆ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬದಲಾವಣೆಗೆ ಸಾಮಾಜಿಕ ಮಾಧ್ಯಮಗಳ ಪರಿಣಾಮಕಾರಿ ಬಳಕೆ ಅಗತ್ಯ: ಎ ನರಸಿಂಹಮೂರ್ತಿ

ಸಮಾರಂಭದಲ್ಲಿ ಬುಡಕಟ್ಟು ಸಮುದಾಯದ ನಾಟಿ ವೈದ್ಯೆ ಮಾದಮ್ಮ, ಸಂಘಟಕ ರಮೇಶ್‌, ಕೋಣೂರೇಗೌಡ ಸೇರಿದಂತೆ ವಿವಿಧ ಸಾಧಕರನ್ನು ಸನ್ಮಾನಿಸಿದರು. ಮೆರವಣಿಗೆಯಲ್ಲಿ ಬಿರ್ಸಾಮುಂಡ ಅವರ ಭಾವಚಿತ್ರ ಹಾಗೂ ಹಲವು ಕಲಾ ತಂಡಗಳು ಗಮನ ಸೆಳೆದವು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಹನೂರು ಶಾಸಕ ಆರ್‌ ಎಂ ಮಂಜುನಾಥ್‌, ಶಾಸಕ ಎ ಆರ್ ಕೃಷ್ಣಮೂರ್ತಿ, ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ, ನಗರಸಭಾ ಸದಸ್ಯ ಎಂ.ಮಹೇಶ್, ದೆಹಲಿಯ ಆದಿವಾಸಿ ಸಮನ್ವಯ ಮಂಚ್ ಭಾರತ್ ಅಧ್ಯಕ್ಷ ವಿ.ಮುತ್ತಯ್ಯ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಎಸ್‌ಪಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ.ಕಲ್ಲೇಶ್, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ.ಎಲ್.ಶ್ರೀನಿವಾಸ್, ಗಿರಿಜನ ಪ್ರಗತಿ ಫೌಂಡೇಶನ್ ಅಧ್ಯಕ್ಷೆ ರತ್ನಮ್ಮ, ಗಿರಿಜನ ಮುಖಂಡರಾದ ಕೇತಮ್ಮ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಮಂಜುಳಾ, ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಬುಡಕಟ್ಟು ಸೋಲಿಗ ಅಭಿವೃದ್ಧಿ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X