ತುಮಕೂರು | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

Date:

Advertisements

ಖಾಸಗಿ ಅನುದಾನರಹಿತ ಶಾಲೆಗಳ ಸಮಸ್ಯೆ ನಿವಾರಣೆಗೆ ಸರ್ಕಾರಗಳು ಸರಿಯಾದ ಪ್ರಯತ್ನ ಮಾಡಲಿಲ್ಲ. ಅವೈಜ್ಞಾನಿಕ ಕಾನೂನು, ನಿಯಮಗಳ ಮೂಲಕ ಸರ್ಕಾರ ಸಮಸ್ಯೆಗಳನ್ನು ಮತ್ತಷ್ಟು ಜಟಿಲಗೊಳಿಸಿದೆ ಎಂದು ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದರು.

ತುಮಕೂರು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಾನೇ ಸ್ಪರ್ಧೆ ಮಾಡುವುದಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ.

“ಶಿಕ್ಷಣ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ ಯಾರೊಬ್ಬರೂ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿಲ್ಲ. ಈ ಕಾರಣದಿಂದ ಒಕ್ಕೂಟದ ಪ್ರತಿನಿಧಿಯಾಗಿ ಚುನಾವಣೆಗೆ ಸ್ಪರ್ಧಿಸಲು ಒಕ್ಕೂಟದ ಸಭೆಯಲ್ಲಿ ಒಮ್ಮತದಿಂದ ತೀರ್ಮಾನ ಮಾಡಲಾಗಿದೆ” ಎಂದು ಹೇಳಿದರು.

Advertisements

“ಹಲವು ವರ್ಷಗಳಿಂದ ಖಾಸಗಿ ಶಾಲೆ ಶಿಕ್ಷಕರು, ಆಡಳಿತ ಮಂಡಳಿಗಳು ಬಹಳ ನೋವು ಅನುಭವಿಸಿವೆ. ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಬಗ್ಗೆ ಯಾವ ವಿಧಾನ ಪರಿಷತ್ ಸದಸ್ಯರೂ ಸ್ಪಂದಿಸಲಿಲ್ಲ. ಕೋವಿಡ್ ಸಂಕಷ್ಟ ಕಾಲದಲ್ಲಿ ಟೀಚರ್ಸ್‌ ವೆಲ್ಫೇರ್ ಫಂಡ್ ಬಳಸಿ ಕಷ್ಟಕ್ಕೆ ನೆರವಾಗಿರಿ ಎಂದು ಒಕ್ಕೂಟದಿಂದ ಮನವಿ ಮಾಡಿದಾಗ ಅದರಲ್ಲಿ ಕೇವಲ ಬಿಡಿಗಾಸು ಬಳಸಲಾಯಿತು. ನಮ್ಮ ಹಲವು ಸಮಸ್ಯೆಗಳ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡಲು ಮನವಿ ಮಾಡಿದರೂ ವಿಧಾನಪರಿಷತ್ ಸದಸ್ಯರು ನಿರ್ಲಕ್ಷ ಮಾಡಿದರು. ಇವರು ನಮ್ಮ ಸಮಸ್ಯೆಗೆ ಸ್ಪಂದಿಸುವುದಿಲ್ಲ. ನಮ್ಮ ನೋವಿನ ಧ್ವನಿಯಾಗಲು ನಮ್ಮ ಪ್ರತಿನಿಧಿ ಇರಬೇಕೆಂಬ ಕಾರಣಕ್ಕೆ ನಾನೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ಹೇಳಿದರು.

“ರಾಜ್ಯದಲ್ಲಿ ಇಷ್ಟು ವರ್ಷಗಳಿಂದ ಸರಿಯಾದ ಶಿಕ್ಷಣ ನೀತಿ ಜಾರಿಯಾಗಲಿಲ್ಲ. ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ಎಂದು ಹೇಳುವ ಸರ್ಕಾರಗಳು ಶಿಕ್ಷಣಕ್ಕೆ ಅಂತಹ ಮಹತ್ವ ಕೊಡುವಲ್ಲಿ ವಿಫಲವಾಗಿವೆ. ಶಿಕ್ಷಣದ ಮಹತ್ವ ಹಾಗೂ ಚಿಂತನೆಯ ಕಾಳಜಿ ಇಲ್ಲದವರಿಂದ ಇಂದು ಶಿಕ್ಷಣ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ” ಎಂದು ಲೋಕೇಶ್ ತಾಳಿಕಟ್ಟೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

“ತಾನು ಶಿಕ್ಷಕನಾಗಿ, ಶಿಕ್ಷಣ ಸಂಸ್ಥೆ ಕಟ್ಟಿ ಅದರ ಕಷ್ಟಗಳನ್ನು ಅನುಭವಿಸುತ್ತಿರುವುದರಿಂದ ಈ ಕ್ಷೇತ್ರದ ಪೂರ್ಣ ಸಮಸ್ಯೆಯ ಅರಿವಿದೆ” ಎಂದು ಹೇಳಿದರು.

ರುಪ್ಸಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಉಮಾಪತಯ್ಯ, ಮುಖಂಡರುಗಳಾದ ಚಂದ್ರಕಾಂತ ಭಂಡಾರಿ, ಗೋವಿಂದರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X