ಕೊಡಗು | ಪಾಲೆಮಾಡು ಕಾನ್ಷಿರಾಂ ನಗರದ 90 ಕುಟುಂಬಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ: ಮಂತರ್ ಗೌಡ

Date:

Advertisements

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾನ್ಷಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.

ಹೊದ್ದೂರು ಬಳಿಯ ಪಾಲೆಮಾಡು ಗ್ರಾಮದ ಕಾನ್ಷಿರಾಮ್ ನಗರ ನಿವಾಸಿಗಳ ಕುಂದುಕೊರತೆ ಸಭೆ ನಡೆಸಿ ಮಾತನಾಡಿದರು.

ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಬಳಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಇದರಿಂದ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪಾಲೆಮಾಡು ಕಾನ್ಷಿರಾಮ್ ನಗರದಲ್ಲಿ ವಾಸಿಸುತ್ತಿರುವ ಎಲ್ಲ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು” ಎಂದು ಹೇಳಿದರು.

Advertisements

“ರಸ್ತೆ ಅಗಲೀಕರಣ, ರಸ್ತೆ ಸರಿಪಡಿಸುವುದು, ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು, ಬಸ್ ಸೌಕರ್ಯದ ಜತೆಗೆ ನ್ಯಾಯ ಬೆಲೆ ಅಂಗಡಿ ಕಲ್ಪಿಸುವುದು ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು” ಎಂದು ಹೇಳಿದರು.

“ಸರ್ಕಾರ ಬಡ ಜನರ ಏಳಿಗೆಗಾಗಿ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಅದನ್ನು ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, “ಪಾಲೆಮಾಡು ನಿವಾಸಿಗಳಿಗೆ ಹಕ್ಕುಪತ್ರ ಕಲ್ಪಿಸುವ ನಿಟ್ಟಿನಲ್ಲಿ ಉಪ ವಿಭಾಗಾಧಿಕಾರಿಯವರ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿ ಕಾನೂನು ಪ್ರಕಾರ 90 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು” ಎಂದು ಹೇಳಿದರು.

“ಇಲ್ಲಿನ 34 ಕುಟುಂಬಗಳಿಗೆ 94ಸಿ ಅಡಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲಾಗುವುದು. ಪಾಲೆಮಾಡು ಕಾನ್ಷಿರಾಮ್ ನಗರದ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರಕ್ಕೆ ಗ್ರಾಮ ಪಂಚಾಯಿತಿ ಮೂಲಕ ಕ್ರಿಯಾ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ಗ್ರಾಮದಲ್ಲಿ 260 ಕುಟುಂಬಗಳು ವಾಸಿಸುತ್ತಿದ್ದು, ನ್ಯಾಯಬೆಲೆ ಅಂಗಡಿ ಹಾಗೂ ಹತ್ತಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಕ್ಕೆ ಕ್ರಮವಹಿಸಲಾಗುವುದು. ಬಸ್ ಸೌಲಭ್ಯ ಕಲ್ಪಿಸಲು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಲಾಗುವುದು” ಎಂದು ನುಡಿದರು.

“ಜಿಲ್ಲಾಡಳಿತ ವತಿಯಿಂದ ಗ್ರಾಮಕ್ಕೆ ಎಲ್ಲ ರೀತಿಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. ತಮ್ಮ ಹಕ್ಕುಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು” ಎಂದರು.

ಗ್ರಾಮದ ಮುಖ್ಯಸ್ಥ ಕೆ ಮೊಣ್ಣಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಇಲ್ಲಿನ ಜನರ ಬದುಕು ಹಸನು ಮಾಡುವ ನಿಟ್ಟಿನಲ್ಲಿ ಕಳೆದ 16 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದ್ದು, ಇಲ್ಲಿನ ಕುಂದುಕೊರತೆಯನ್ನು ಪರಿಹರಿಸಬೇಕು” ಎಂದು ಮನವಿ ಮಾಡಿದರು.

“ಹಕ್ಕುಪತ್ರ ವಿತರಣೆಯಲ್ಲಿ ಲೋಪವಾಗಿದ್ದು, ಇದನ್ನು ಸರಿಪಡಿಸಬೇಕು. 1200ಕ್ಕೂ ಅಧಿಕ ಮಂದಿ ವಾಸ ಮಾಡುತ್ತಿದ್ದು, ಕನಿಷ್ಟ ಸೌಲಭ್ಯ ಈಡೇರಿಸಬೇಕು. ಇಲ್ಲಿನ ಕ್ರೀಡಾಂಗಣ ನಿರ್ಮಾಣ ಮತ್ತು ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಗೊಂದಲವಿದ್ದು, ಇದನ್ನು ಸರಿಪಡಿಸಬೇಕು. ಜನಸಂಖ್ಯೆ ಆಧಾರದಲ್ಲಿ ಪ್ರತಿ ಕುಟುಂಬಕ್ಕೂ 2 ಎಕರೆ ಭೂಮಿ ಒದಗಿಸಬೇಕು. ಸಮಾಜ ಮುಖಿಯಾಗಿ ಬದುಕಲು ಅವಕಾಶ ಮಾಡಬೇಕು. ನೊಂದ ಜನರಿಗೆ ನ್ಯಾಯ ಒದಗಿಸಬೇಕು” ಎಂದು ಮೊಣ್ಣಪ್ಪ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

ಗ್ರಾ.ಪಂ.ಅಧ್ಯಕ್ಷೆ ಎಚ್ ಎ ಹಂಸ, ಜಿ.ಪಂ.ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ, ಹಮೀದ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್,  ಗ್ರಾ.ಪಂ. ಉಪಾಧ್ಯಕ್ಷೆ ಅನುರಾಧ, ಗ್ರಾ.ಪಂ.ಸದಸ್ಯರು, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಪಿಡಿಒ ಅಬ್ದುಲ್ಲಾ, ರಂಜಿತ್ ಮೌರ್ಯ, ಲಕ್ಷ್ಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X