ಯಾದಗಿರಿ | ಬರ ಪರಿಹಾರ ಕಾರ್ಯ ಯುದ್ಧೋಪಾದಿಯಲ್ಲಿ ಆರಂಭಿಸಲು ಎಐಕೆಕೆಎಂಎಸ್ ಆಗ್ರಹ

Date:

Advertisements

ಬರಗಾಲ ಪೀಡಿತ ಎಂದು ಘೋಷಣೆ ಮಾಡಿರುವ ಪ್ರದೇಶಗಳಲ್ಲಿ ಬರಪರಿಹಾರ ಕಾಮಗಾರಿಗಳು ಇನ್ನೂ ಆರಂಭವಾಗದೇ ಇರುವುದು ಚಿಂತಾಜನಕವಾದ ವಿಷಯವಾಗಿದೆ. ಇಲ್ಲಿಯವರೆಗೂ ಯಾವುದೇ ರೀತಿಯ ಕಾಮಗಾರಿಗಳಾಗಲೀ, ಯೋಜನೆಗಳಾಗಲೀ ಬಹಿರಂಗವಾಗಿಲ್ಲ. ಪರಿಹಾರ ಕಾರ್ಯಗಳನ್ನು ಆರಂಭಿಸದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಬ್ಬರನ್ನು ಒಬ್ಬರು ದೂಷಿಸುವುದರಲ್ಲಿಯೇ ಕಾಲಕಳೆಯುತ್ತಿರುವುದರಿಂದ ರೈತರ ಪರಿಸ್ಥಿತಿ ಇನ್ನೂಷ್ಟು ಗಂಭೀರವಾಗಿದೆ ಎಂದು ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಅಧ್ಯಕ್ಷ  ಶರಣಗೌಡ ಗೂಗಲ್ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಪ್ರತಿಭಟನೆ ನಡೆಸಿದ ಎಐಕೆಕೆಎಂಎಸ್ ಯಾದಗಿರಿ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಹಕ್ಕೋತ್ತಾಯ ಪತ್ರವನ್ನು ಸಲ್ಲಿಸಿ ಮಾತನಾಡಿದ ಅವರು, “ಈ ವರ್ಷ ಮುಂಗಾರು ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಸಂಪೂರ್ಣ ಬೆಳೆ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಉತ್ತಮ ಮಳೆ ಬಂದಿದ್ದು ರೈತರಲ್ಲಿ ಹಿಂಗಾರು ಬೆಳೆಯ ಕುರಿತು ಹೊಸ ಭರವಸೆ ಚಿಗುರಿತ್ತು. ಆದರೆ ಇಲ್ಲಿಯವರೆಗೂ ಮಳೆ ಬಾರದೆ ಇರುವುದರಿಂದ ರೈತರು ಮತ್ತೆ ಸಂಕಷ್ಟದಲ್ಲಿ ಸಿಕ್ಕಿಕೊಂಡಿದ್ದಾರೆ. ಇಲ್ಲಿಯವರೆಗೆ ತೊಗರಿ, ಶೇಂಗಾ, ಕಬ್ಬು ಹಾಗೂ ಇನ್ನಿತರ ಬೆಳೆಗಳನ್ನು ಬೆಳೆದಿರುವ ರೈತರು ಈಗ ನೀರಿಲ್ಲದೆ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಅಷ್ಟೋ ಇಷ್ಟೋ ಬಾವಿ, ಬೋರ್‌ವೆಲ್‌ಗಳನ್ನು ಹೊಂದಿರುವವರು ಕೈಗೆ ಬಂದಿರುವ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದ 31 ಜಿಲ್ಲೆಗಳ 226 ತಾಲ್ಲೂಕುಗಳ ಪೈಕಿ 161 ತೀವ್ರ, 34 ಸಾಮಾನ್ಯ ಬರ ಪೀಡಿತ ತಾಲ್ಲೂಕುಗಳು ಎಂದು ಸಚಿವ ಸಂಪುಟದ ಒಪ್ಪಿಗೆಯ ನಂತರ ಕಂದಾಯ ಇಲಾಖೆ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಬರಪರಿಹಾರ
ಕಾರ್ಯಗಳನ್ನು ತುರ್ತಾಗಿ ಆರಂಭಿಸಬೇಕಿತ್ತು. ಕೇಂದ್ರ ತಂಡವು ಕರ್ನಾಟಕದ ವಿವಿದಡೆ ಬರ ಪರಿಹಾರ ಸಮೀಕ್ಷೇ ನಡೆಸಿ ಹಲವು ವಾರಗಳು ಕಳೆದರು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಹಣ ಬಿಡುಗಡೆ ಮಾಡದೆ ಇರುವುದು ಅತ್ಯಂತ ನೋವಿನ ಸಂಗತಿ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬಗ್ಗೆ ಹೊಂದಿರುವ ದಿವ್ಯ ನಿರ್ಲಕ್ಷವನ್ನು ಎತ್ತಿತೋರಿಸುತ್ತದೆ” ಎಂದು ತೀವ್ರವಾಗಿ ಖಂಡಿಸಿದ್ದರು.

Advertisements

“ನವೆಂಬರ್ ತಿಂಗಳಲ್ಲಿ ಅಳಿದುಳಿದ ಬೆಳೆ ರೈತರಿಗೆ ಸಿಗದಂತಾದರೆ ಸಂಪೂರ್ಣವಾಗಿ ರೈತರು ದಿವಾಳಿ ಆಗುವುದು ಖಂಡಿತ. ಇದರಿಂದ ರೈತರು ಹೆಚ್ಚು ಕಂಗಾಲಾಗಿದ್ದಾರೆ. ಬರಪೀಡಿತ ಪ್ರದೇಶದ ಬೆಳೆಗಳು ಇಳುವರಿಯನ್ನು ನೀಡುವುದಿಲ್ಲ ಮತ್ತು ಕೃಷಿಯ ಮೂಲಕ ಏಕೈಕ ಆದಾಯವನ್ನು ಗಳಿಸುವ ರೈತರು ಈ ಪರಿಸ್ಥಿತಿಯಿಂದ ಹೆಚ್ಚು
ಹಾನಿಗೊಳಗಾಗಿದ್ದಾರೆ. ತಮ್ಮ ಬದುಕನ್ನು ಪೂರೈಸುವ ಪ್ರಯತ್ನದಲ್ಲಿ ಅನೇಕ ರೈತರು ಸಾಲದ ಸುಳಿಯಲ್ಲಿ ಸಿಲುಕುತ್ತಾರೆ. ಇಂತಹ ಪರಿಸ್ಥಿತಿಯಿಂದ ರೈತರ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತವೆ. ಪರಿಸ್ಥಿತಿಯನ್ನು ಇನ್ನೂ ಹದಗೆಡುವಂತೆ ಮಾಡದೆ ಕೂಡಲೇ ಬರಪರಿಹಾರ ಕೆಲಸಗಳನ್ನು ಕೈಗೆತ್ತಿಕೊಂಡು ತುರ್ತು ಕ್ರಮಕ್ಕೆ
ಮುಂದಾಗುವುದು ಈ ಗಳಿಗೆಯ ಅವಶ್ಯಕತೆಯಾಗಿದೆ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಆಟೋ-ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಈ ಸಂದರ್ಭದಲ್ಲಿ, ಜಿಲ್ಲಾ ಕಾರ್ಯದರ್ಶಿ ಭೀಮರಡ್ಡಿ ಹಿರೆಬಾನರ್ , ಜಿಲ್ಲಾ ಉಪಾಧ್ಯಕ್ಷ ಜಮಲ್ ಸಾಬ್, ಶಿವರಾಜ್ ನಗನೂರ್, ಸಿದ್ದನಗೌಡ ನಗನೂರ್, ಖಾಜಾ ಮೈನಾದಿನ್, ಸಿದ್ದಪ್ಪ ಇಮ್ಲಾಪುರ್, ಗುರಪ್ಪ ಗೌಡ ನಗನೂರ್, ರಾಜು ಇಮ್ಲಾಪುರ್, ಚಂದ್ರಡ್ಡಿ ಗೋಡಿಕಾರ್, ರಾಮರೆಡ್ಡಿ , ಮಲ್ಲಮ್ಮ ಬಳಳ್ಳಿ , ಮಲ್ಲಮ್ಮ ಸುರಪುರ, ಸರೋಜಮ್ಮ ಆದಿಮನಿ, ಚಂದ್ರರೆಡ್ಡಿ ಮಲ್ಕನಹಳ್ಳಿ, ಶರಣಪ್ಪ ಮಲಕಪನಹಳ್ಳಿ, ವೇಕಟೇಶ ಮಾಲಿ ಪಾಟೀಲ್, ಭಾಗವಹಿಸಿದ್ದರು.

ಬೇಡಿಕೆಗಳು :
1. ಬರಪರಿಹಾರ ಕಾಮಗಾರಿಗಳನ್ನು ಕೂಡಲೇ ಯುದ್ಧೋಪಾಧಿಯಲ್ಲಿ ಆರಂಭಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕು.
2. ಬ್ಯಾಂಕ್ ಸಾಲ ಸೇರಿದಂತೆ ರೈತರ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು.
3. ಉದ್ಯೋಗ ಖಾತ್ರಿ ಯೋಜನೆಯನ್ನು ವರ್ಷಪೂರ್ತಿ ವಿಸ್ತರಿಸಿ ರೈತರು ಗುಳೆ ಹೋಗುವುದನ್ನು ತಪ್ಪಿಸಬೇಕು.

4. ಬರಪೀಡಿತ ಗ್ರಾಮಗಳಲ್ಲಿ ಉಚಿತ ಶುದ್ದ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರು ಮತ್ತು ಮೇವಿನ
ವ್ಯವಸ್ಥೆಯನ್ನು ಮಾಡಿ.
5. ಶಾಲೆ, ಕಾಲೇಜು ಮಕ್ಕಳ ಶುಲ್ಕವನ್ನು ಮನ್ನಾ ಮಾಡಿ ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ವರ್ಷವಿಡೀ ಉಚಿತ ಪಡಿತರ ನೀಡಲು ಕ್ರಮಕೈಗೊಳ್ಳಿ.
6. ಜಿಲ್ಲೆಯಾದ್ಯಂತ ಕೆರೆ ಜೋಡಣೆ ಯೋಜನೆಯನ್ನು ಜಾರಿಗೊಳಿಸಿ ನೀರಿನ ಸಮಸ್ಯೆಯ ಶಾಶ್ವತ ಮುಕ್ತಿಗಾಗಿ ಕ್ರಮ ಜರುಗಿಸಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X