ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಭುಗಿಲೆದ್ದ ಅಸಮಾಧಾನ: ‘ನನ್ನನ್ನು ಖರೀದಿ ಮಾಡಕ್ಕಾಗಲ್ಲ’ ಎಂದ ಯತ್ನಾಳ್

Date:

Advertisements

ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಒಳಗೊಳಗೆ ಅಸಮಾಧಾನ ಭುಗಿಲೆದ್ದಿರುವ ಹೊತ್ತಿನಲ್ಲೇ ಬಿಜೆಪಿ ಪಾಳಯದ ಅತೃಪ್ತ ನಾಯಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ.

ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆ ಇಂದು ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದಾರೆ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್, ‘ಕರ್ನಾಟಕದಲ್ಲಿ ಆಗಿರುವ ಬೆಳವಣಿಗೆ, ಚುನಾವಣೆಯಲ್ಲಿ ಯಾರು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ, ಒಂದು ವರ್ಗದ ಕೇಂದ್ರೀಕೃತವಾಗಿ ಮಾಡಿದ್ದರು ಎಂದು ವಿವರಿಸಿದ್ದೇನೆ. ಅವರಿಗೆ ಎಷ್ಟೋ ವಿಷಯ ಗೊತ್ತಿರಲಿಲ್ಲ, ನಾನು ಧೈರ್ಯದಿಂದ ಎಲ್ಲವನ್ನೂ ಮುಚ್ಚುಮರೆ ಇಲ್ಲದೆಯೇ ಹೇಳಿದ್ದೇನೆ. ವರಿಷ್ಠರು ಕೆಲವೇ ಚೇಲಾಗಳ ಮಾತು ಕೇಳಿ ನಿರ್ಧಾರ ತೆಗೆದುಕೊಳ್ಳಬಾರದು, ಕೆಲವರು ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನ ಮಾಡುತ್ತಾರೆ, ನಾನು ಅಂಜಲ್ಲ ಎಂದು ಹೇಳಿದ್ದೇನೆ. ಇಬ್ಬರೂ ಬಹಳ ಖುಷಿಯಾದರು’ ಎಂದು ಹೇಳಿದರು.

Advertisements

‘ನೀವು ಎಲ್ಲವನ್ನೂ ಧೈರ್ಯವಾಗಿ ಹೇಳಿದ್ದೀರಿ. ಪಕ್ಷದ ಅಧ್ಯಕ್ಷರು ಮತ್ತು ಪ್ರಧಾನಿಗೆ ಹೇಳುತ್ತೇವೆ ಎಂದು ಅವರು ಹೇಳಿದ್ದಾರೆ. ನಿಮ್ಮನ್ನು ಮನೆಗೆ ಕರೆಸುವಷ್ಟು ದೊಡ್ಡ ಮನೆ ನಂದಲ್ಲ ಎಂದು ಹೇಳಿದೆ. ಅದಕ್ಕೆ ನನ್ನ ಮನೆಯೂ ಸಣ್ಣದಿದೆ, ಮುಂದಿನ ಸಲ ನನ್ನ ಮನೆ ತೋರಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ಹಿಂದೆ ಎಡಪಂಥೀಯರ ‘ಎಕೋ ಚೇಂಬರ್‌’ ಒಳಗಿದ್ದೆ: ಮೋದಿ ಪರವಾಗಿ ಒಲವು ತೋರಿದ ಶೆಹ್ಲಾ ರಶೀದ್‌ ಹೇಳಿಕೆ

ನನ್ನನ್ನು ಖರೀದಿ ಮಾಡುವುದಕ್ಕೆ ಆಗುವುದಿಲ್ಲ. ನಿನ್ನೆ ಒಬ್ಬ ಬಂದಿದ್ದ. ಆದರೆ ಅದೆಲ್ಲ ಆಗದ ಕೆಲಸ ಎಂದಿದ್ದೇನೆ. ನಿನ್ನಂಥವರನ್ನ ಹತ್ತು ಜನರನ್ನು ಖರೀದಿ ಮಾಡುವ ಶಕ್ತಿ ನನಗಿದೆ ಎಂದು ಹೇಳಿ, ವಾಪಸ್ ಕಳಿಸಿದ್ದೇನೆ. ವಿಜಯೇಂದ್ರ ನೇಮಕಕ್ಕೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ, ಶಾಸಕಾಂಗ ಪಕ್ಷದ ಸಭೆಗೆ ಹೋಗುತ್ತೇನೆ. ಅಲ್ಲಿ ನನ್ನ ಅಭಿಪ್ರಾಯ ಹೇಳುತ್ತೇನೆ ಎಂದ ಯತ್ನಾಳ್ ಸ್ಪಷ್ಟವಾಗಿ ತಿಳಿಸಿದ್ದಾರೆ.

ಪಕ್ಷ ಕೇವಲ ಒಂದು ಕುಟುಂಬದ ಸೊತ್ತಾಗಬಾರದು. ಉತ್ತರ ಕರ್ನಾಟಕಕ್ಕೂ ಪ್ರಾಮುಖ್ಯತೆ ದೊರಕಬೇಕೆಂದು ಕೇಳಿದ್ದೇನೆ. ನನ್ನ ಮನೆಗೆ ಬಂದ ಉಸ್ತುವಾರಿಗಳಿಗೂ ಇದೇ ಮಾತನ್ನು ಹೇಳಿದ್ದೇನೆ ಎಂದು ಅವರು ತಿಳಿಸಿದರು.

ವಿಪಕ್ಷ ನಾಯಕನ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡಬೇಕು, ಅದರಲ್ಲಿ ರಾಜಿಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ ಯತ್ನಾಳ್, ದಕ್ಷಿಣ ಕರ್ನಾಟಕದವರೇ ಆಗಬೇಕಾ? ಮಂಗಳೂರು ಬಿಟ್ಟರೆ ದಕ್ಷಿಣ ಕರ್ನಾಟಕದ ಎಷ್ಟು ಶಾಸಕರು ಇದ್ದಾರೆ? ಬಹಳಷ್ಟು ಶಾಸಕರು ನಮ್ಮ ಜೊತೆ ಇದ್ದಾರೆ ಆದರೆ ಅವರಿಗೆ ಮಾತಾಡಲು ಧಮ್ ಇಲ್ಲ. ಅವರಲ್ಲಿ ಬಹಳಷ್ಟು ಜನ ತಮ್ಮ ಮಕ್ಕಳನ್ನು ಲೋಕಸಭೆಗೆ ನಿಲ್ಲಿಸಬೇಕು ಅಂತಾ ಇದ್ದಾರೆ. ಉತ್ತರ ಕರ್ನಾಟಕಕ್ಕೆ ಅವಕಾಶ ಕೊಡದೇ ಇದ್ದರೆ ಜನ ತೀರ್ಮಾನ ಮಾಡುತ್ತಾರೆ, ಆಗ ನಾವೂ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

‘ನನ್ನ ಮನೆಗೆ ವಿಜಯೇಂದ್ರ ಬರುವ ಅಗತ್ಯವಿಲ್ಲ’ ಎಂದಿದ್ದರೇ ಯತ್ನಾಳ್?

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ನೇಮಕಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಯತ್ನಾಳ್, ‘ವಿಜಯೇಂದ್ರ ಅವರು ತಮ್ಮನ್ನು ಮಾತನಾಡಿಸಲು ಬರುವ ಅಗತ್ಯವಿಲ್ಲ. ವಿಜಯೇಂದ್ರ ಜೊತೆ ಮಾತನಾಡಲು ಇಚ್ಛಿಸುವುದಿಲ್ಲ. ಅವರು ನನ್ನ ಮನೆಗೆ ಕಾಲಿಡುವುದು ಬೇಡ’ ಎಂದು ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್​ ಅವರಿಗೆ ಕರೆ ಮಾಡಿ ತಿಳಿಸಿದ್ದರು ಎಂದು ವರದಿಯಾಗಿದೆ. ಹೀಗಾಗಿಯೇ ಹೈಕಮಾಂಡ್ ವೀಕ್ಷಕರ ಜೊತೆ ಯತ್ನಾಳ್ ಮನೆಗೆ ವಿಜಯೇಂದ್ರ ತೆರಳಲಿಲ್ಲ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X