ಶಾಲೆಯಲ್ಲಿ ಬಿಸಿಯೂಟಕ್ಕಾಗಿ ತಯಾರಿಸಿದ್ದ ಸಾಂಬರ್ ಪಾತ್ರೆಗೆ 7 ವರ್ಷದ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ಮುಖ್ಯಶಿಕ್ಷಕಿ ಮತ್ತು ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಗಗೇರಾ ಗ್ರಾಮದ ಶಾಲೆಯಲ್ಲಿ ಗುರುವಾರ ಘಟನೆ ನಡೆದಿತ್ತು. ಘಟನೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಶಾಲೆಯ ಮುಖ್ಯಶಿಕ್ಷಕಿ ಲಾಲಬಿ ನಾದಾಫ್ ಹಾಗೂ ಸಹಶಿಕ್ಷಕ ರಾಜು ಚವ್ಹಾಣ ಅವರನ್ನು ಅಮಾನತು ಮಾಡಿ ಕಲಬುರಗಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದರ ಆದೇಶ ಹೊರಡಿಸಿದ್ದಾರೆ.
ಊಟದ ಸಮಯದಲ್ಲಿ ವಿದ್ಯಾರ್ಥಿನಿ ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ, ಆಕೆ ಆಯತಪ್ಪಿ ಸಾಂಬರ್ ಪಾತ್ರೆಗೆ ಬಿದ್ದಿದ್ದಾಳೆ. ಆಕೆಯನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.