ಮೈಸೂರು | ಕೆಲಸ ಮಾಡದ ಅಧಿಕಾರಿಗಳನ್ನು ಎಚ್ಚರಿಸಲು ನಿದ್ದೆ ಚಳುವಳಿ ಹಮ್ಮಿಕೊಂಡ ರೈತರು

Date:

Advertisements

ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ, ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

“ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ತಾಲೂಕು ಆಡಳಿತದಿಂದ ಜನರ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ಸರ್ಕಾರಿ ಭೂಮಿಯನ್ನು ಭೂ ಮಾಫಿಯಾದವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವುಗೊಳಿಸುವಂತೆ ಈಗಿನ ಶಾಸಕರಿಗೆ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕ್ರಮ ವಹಿಸುವಲ್ಲಿ ತಹಶೀಲ್ದಾರ್ ವಿಫಲರಾಗಿದ್ದಾರೆ” ಎಂದು ರೈತರು ಆರೋಪಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ 2012ನೇ ಸಾಲಿನ ಸಿವಿಲ್ ಆದೇಶ ಉಪವಿಭಾಗಾಧಿಕಾರಿಗಳ ಆದೇಶವಿದ್ದರೂ ಕೂಡ ಐದು ಭಾರಿ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಂದ ವರದಿಗಳನ್ನು ತೆಗೆದುಕೊಂಡಿದ್ದಾರೆ. ಆದರೆ ಸಿವಿಲ್ ಆದೇಶ ಏಕೆ ಮಾಡಬೇಕೆಂದು ರೈತರು ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಜೆಜೆಎಂ ಕಾಮಗಾರಿ ಕಳಪೆ ಆರೋಪ : ಗ್ರಾ.ಪಂ. ಸದಸ್ಯನಿಂದ ಏಕಾಂಗಿ ಪ್ರತಿಭಟನೆ

“ಒತ್ತುವರಿಯಾಗಿರುವ ಸ್ಮಶಾನದ ಜಾಗ ತೆರವುಗೊಳಿಸಿಲ್ಲ. ರೈತರು ತಮ್ಮ ಜಮೀನುಗಳಿಗೆ ತೆರಳಲು ಬಂಡಿ ದಾರಿಗಳನ್ನು ತೆರವು ಮಾಡುವ ಕೆಲಸವನ್ನೂ ಮಾಡಿಲ್ಲ. ಇದಕ್ಕಾಗಿ ನಾವು ನಿದ್ದೆ ಮಾಡುವ ಮೂಲಕ ತಾಲೂಕು ಆಡಳಿತದ ವಿರುದ್ಧ ನಿದ್ದೆ ಚಳುವಳಿ ಹಮ್ಮಿಕೊಂಡಿದ್ದೇವೆ. ಶಾಸಕರ ಮಾತಿಗೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಕೂಡಲೇ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಬೇಕು. ಒಂದು ವೇಳೆ ಇದೇ ತಹಶೀಲ್ದಾರ್ ಹುದ್ದೆಯಲ್ಲಿ ಮುಂದುವರೆದರೆ ಪ್ರತಿದಿನ ಹೋರಾಟ ಮಾಡಬೇಕಾಗುತ್ತದೆ” ಎಂದು ಪ್ರತಿಭಟನಾನಿರತ ರೈತರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X