ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣ ದಾಖಲು

Date:

Advertisements

ರೈಲ್ವೆ ಕಾಯಿದೆಯ ಸೆಕ್ಷನ್ 167ರ ಅಡಿಯಲ್ಲಿ ರೈಲು ಅಥವಾ ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣಗಳನ್ನು ದಾಖಲಿಸಲಾಗಿದೆ. ಜತೆಗೆ, ಬೆಂಗಳೂರು ವಿಭಾಗದಾದ್ಯಂತ ವ್ಯಾಪಕ ಅಗ್ನಿ ಸುರಕ್ಷತೆ ಜಾಗೃತಿ ಅಭಿಯಾನವನ್ನು ನಡೆಸಲಾಗಿದೆ ಎಂದು ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಈ ವರ್ಷದ ಏಪ್ರಿಲ್ ಮತ್ತು ಅಕ್ಟೋಬರ್ ನಡುವೆ ರೈಲುಗಳಲ್ಲಿ ಪಟಾಕಿ ಮತ್ತು ಬೆಂಕಿಯಿಡುವ ವಸ್ತುಗಳನ್ನು ಸಾಗಿಸುವ ವ್ಯಕ್ತಿಗಳ ವಿರುದ್ಧ ರೈಲ್ವೆ ಕಾಯ್ದೆಯಡಿ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶುಲ್ಕ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಗೆ ಕಾರು ಗುದ್ದಿದ ಚಾಲಕ

Advertisements

“ಒಟ್ಟು 30 ನಿಲ್ದಾಣಗಳ ಅಭಿಯಾನ ನಡೆಸಲಾಗಿದ್ದು, 191 ರೈಲುಗಳಲ್ಲಿ ತಪಾಸಣೆ ಮಾಡಲಾಗಿದೆ. 3,000 ರೈಲ್ವೆ ಸಿಬ್ಬಂದಿ ಮತ್ತು 5,056 ಪ್ರಯಾಣಿಕರಿಗೆ ಸುರಕ್ಷತಾ ಕ್ರಮಗಳ ಕುರಿತು ಕೌನ್ಸೆಲಿಂಗ್ ನೀಡಲಾಯಿತು. 90 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಅಗ್ನಿಶಾಮಕ ಸಾಧನಗಳನ್ನು ಬಳಸುವ ಕುರಿತು ತರಬೇತಿ ನೀಡಲಾಗಿದೆ. 10000 ಕ್ಕೂ ಹೆಚ್ಚು ಎಸ್‌ಎಮ್‌ಎಸ್‌ ಕಳುಹಿಸಲಾಗಿದೆ. 3,500 ಕರಪತ್ರಗಳನ್ನು ವಿತರಿಸಲಾಗಿದೆ. 11 ರೈಲು ನಿಲ್ದಾಣಗಳಲ್ಲಿ ನಾಟಕಗಳನ್ನು ಪ್ರದರ್ಶಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X