ಮಂಗಳೂರು | ಆದೇಶ ಪಾಲಿಸದ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಗ್ರಾಹಕ ಆಯೋಗ

Date:

Advertisements

ಗ್ರಾಹಕರ ಪರವಾಗಿ ತಾನು ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ ಎಂದು ‘ಬಾರ್ & ಬೆಂಚ್‘ ವರದಿ ಮಾಡಿದೆ.

ಮಂಗಳೂರು ನಗರದ ಮಾರಿಯನ್‌ ಇನ್‌ಫ್ರಾಸ್ಟ್ರಕ್ಚರ್‌ನ ಪಾಲುದಾರರಾದ ಉಜ್ವಲ್‌ ಡಿಸೋಜಾ, ನವೀನ್‌ ಕರ್ಡೋಜಾ, ವಿಲಿಯಂ ಸಲ್ಡಾನಾ, ಗಾಯತ್ರಿ ಮತ್ತು ಲೂಸಿ ಸಲ್ಡಾನಾ ಅವರಿಗೆ ಶಿಕ್ಷೆ ವಿಧಿಸಿ ಆಯೋಗದ ಅಧ್ಯಕ್ಷ ಪ್ರಕಾಶ್ ಕೆ, ಸದಸ್ಯ ಪಿ ವಿ ಲಿಂಗರಾಜು, ಮಹಿಳಾ ಸದಸ್ಯೆ ಎಚ್‌ ಜಿ ಶಾರದಮ್ಮ ಅವರು ಆದೇಶ ನೀಡಿರುವುದಾಗಿ ವರದಿಯಾಗಿದೆ.

ಆಯೋಗ, ನ್ಯಾಯಾಲಯ ಆದೇಶ ನೀಡಿದೆ ಎಂದು ಚೆನ್ನಾಗಿ ತಿಳಿದಿದ್ದರೂ ಕೂಡ ಕ್ರಯ ಪತ್ರವನ್ನು ಜಾರಿಗೊಳಿಸುವ ಮೂಲಕ ಆರೋಪಿಗಳು ಆಸ್ತಿ ಮಾರಾಟ ಮಾಡಿ ಕಾನೂನಿನ ಉಲ್ಲಂಘಿಸಿರುವುದು ಸ್ಪಟಿಕದಷ್ಟೇ ಸ್ಪಷ್ಟ. ಆದ್ದರಿಂದ 24.06.2017ರಂದು ಈ ಆಯೋಗ ಜಾರಿಗೊಳಿಸಿದ ಆದೇಶ ಪಾಲಿಸದೇ ಇದ್ದುದಕ್ಕಾಗಿ ಗ್ರಾಹಕ ಸಂರಕ್ಷಣಾ ಕಾಯಿದೆಯ 2019ರ ಅಡಿ ಆರೋಪಿ ಸಂಖ್ಯೆ 1ರಿಂದ 3 ಹಾಗೂ 4 (ಎ) ಮತ್ತು 4 (ಬಿ) ತಪ್ಪಿತಸ್ಥರು ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.

Advertisements

marian

ಮಂಗಳೂರಿನ ಗುಜ್ಜರೆಕೆರೆ ಎಂಬಲ್ಲಿ ಆರೋಪಿಗಳು ನಿರ್ಮಿಸಿದ್ದ ಬಹುಮಹಡಿ ವಸತಿ ಕಟ್ಟಡದಲ್ಲಿ ಫ್ಯಾಟ್‌ವೊಂದನ್ನು ದೂರುದಾರೆ ಡಾ. ಲವೀನಾ ಎಂಬುವವರು ಖರೀದಿಸಿದ್ದರು. ಕಾರ್‌ ಪಾರ್ಕಿಂಗ್‌ ಜಾಗವನ್ನು ಒದಗಿಸಲು ಸಹ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಕಾರ್‌ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಲವೀನಾ ಆರೋಪಿ ಬಿಲ್ಡರ್‌ಗಳಿಗೆ ನೋಟಿಸ್‌ ನೀಡಿದ್ದರು. ಆಗಲೂ ಸೌಲಭ್ಯ ದೊರೆಯದ ಕಾರಣಕ್ಕೆ ಪ್ರಕರಣ ಮಂಗಳೂರಿನ ಗ್ರಾಹಕ ಆಯೋಗದ ಅಂಗಳ ತಲುಪಿತ್ತು.

ವಿಚಾರಣೆ ನಡೆಸಿದ ಗ್ರಾಹಕ ಆಯೋಗವು ದೂರುದಾರರಿಗೆ ಕಾರ್‌ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಬೇಕು ಮತ್ತು ₹50,000 ರೂಪಾಯಿ ಪರಿಹಾರ ಹಾಗೂ ₹10,000 ರೂಪಾಯಿ ದಾವೆ ವೆಚ್ಚ ನೀಡಬೇಕು ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ರಾಜ್ಯ ಗ್ರಾಹಕ ಆಯೋಗದ ಮೊರೆ ಹೋಗಿದ್ದರು. ಆದರೆ ಅಲ್ಲಿ ಆರೋಪಿಗಳ ಮನವಿ ತಿರಸ್ಕೃತಗೊಂಡು ಮಂಗಳೂರಿನ ಗ್ರಾಹಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದರ ಹೊರತಾಗಿಯೂ ಆರೋಪಿಗಳು ದೂರುದಾರೆ ಅವರಿಗೆ ಕಾರ್‌ ಪಾರ್ಕಿಂಗ್‌ ಸೌಲಭ್ಯ ಕಲ್ಪಿಸಿರಲಿಲ್ಲ.

ಇದನ್ನು ಓದಿದ್ದೀರಾ? ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್ ಕೃತ್ಯಕ್ಕೆ ಬಳಸಿದ್ದ ಚೂರಿ ಪತ್ತೆ ಹಚ್ಚಿದ ಪೊಲೀಸರು

ಹೀಗಾಗಿ ಅರ್ಜಿದಾರೆ ಸೆಪ್ಟೆಂಬರ್ 2022ರಲ್ಲಿ ಮತ್ತೆ ಗ್ರಾಹಕ ಆಯೋಗದ ಮೊರೆ ಹೋದರು. ಇದೀಗ ಅವರ ಅರ್ಜಿ ಪುರಸ್ಕರಿಸಿರುವ ಆಯೋಗವು, ಬಿಲ್ಡರ್‌ಗಳಿಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿದಲ್ಲಿ ಆರು ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು ಎಂದು ಗ್ರಾಹಕ ನ್ಯಾಯಾಲಯವು ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X