ಸುರಂಗ ದುರಂತ: 8ನೇ ದಿನವಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ, ಆಪತ್ತಿನಲ್ಲಿ 41 ಮಂದಿ

Date:

Advertisements

ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 8ನೇ ದಿನಕ್ಕೆ ಕಾಲಿಟ್ಟಿದ್ದು, ಸುರಂಗ ಕುಸಿಯುವ ಭೀತಿಯಿಂದ ಪ್ರಸ್ತುತ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಉತ್ತರಾಖಂಡದ ಸುರಂಗದಲ್ಲಿ 170 ಗಂಟೆಗಳ ಕಾಲ ಸಿಲುಕಿ ಹಾಕಿಕೊಂಡಿರುವ ಕಾರ್ಮಿಕರ ರಕ್ಷಣೆಗೆ ನಡೆಯುತ್ತಿರುವ ಕಾರ್ಯಾಚರಣೆಗೆ ಕೊರೆಯುವ ಯಂತ್ರದಲ್ಲಿನ ದೋಷ ಮತ್ತೆ ತಡೆಯೊಡ್ಡಿದ್ದು, ಕಾರ್ಮಿಕರ ಕುಟುಂಬಗಳ ಆತಂಕ ಹೆಚ್ಚಿದೆ.

ಯಂತ್ರದಿಂದ ದಿಢೀರನೇ ದೊಡ್ಡ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಯಂತ್ರವನ್ನು ಸ್ಥಗಿತಗೊಳಿಸಲಾಗಿತ್ತು. ಎರಡನೇ ಅಧಿಕ ಸಾಮರ್ಥ್ಯದ ಕೊರೆಯುವ ಯಂತ್ರವನ್ನು ದುರಂತ ಸ್ಥಳಕ್ಕೆ ತರಲಾಗಿದ್ದು,ಕಾರ್ಯಾಚರಣೆ ಸದ್ಯದಲ್ಲೇ ಮರು ಆರಂಭವಾಗಲಿದೆ ಎಂದು ಉನ್ನತ ಮೂಲಗಳು ಹೇಳಿವೆ.

Advertisements

ಕಳೆದ ಭಾನುವಾರ ನಿರ್ಮಾಣ ಹಂತದ ಸುರಂಗ ಕುಸಿದು 41 ಮಂದಿ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಕೊಳವೆಗಳ ಮೂಲಕ ಆಹಾರ ಮತ್ತು ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಅಧಿಕಾರಿಗಳು ಮತ್ತು ಸ್ಳಳದಲ್ಲಿರುವ ತಜ್ಞರ ತಂಡವು 41 ಜನರನ್ನು ರಕ್ಷಿಸಲು ಕೇವಲ ಒಂದು ಯೋಜನೆಗೆ ಬದಲಾಗಿ ಐದು ಯೋಜನೆಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡಲು ನಿರ್ಧರಿಸಿದೆ.

ದುರಂತ ನಡೆದ ಸ್ಥಳಕ್ಕೆ ಆಗಮಿಸಿರುವ ಕಾರ್ಮಿಕರ ಕುಟುಂಬಗಳು ಆತಂಕದಲ್ಲಿವೆ. ಸಿಲುಕಿಕೊಂಡಿರುವ ಕಾರ್ಮಿಕರ ಆರೋಗ್ಯ ಸ್ಥಿತಿ ಹದಗೆಡುವ ಮುನ್ನ ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಿಲುಕಿಕೊಂಡಿರುವ ಕಾರ್ಮಿಕನ ಸಹೋದರರೊಬ್ಬರು ಹೇಳಿದ್ದಾರೆ.

ನಿರ್ಮಾಣ ಹಂತದ ಸಿಲ್ಕ್ಯಾತ್ರಾ ಸುರಂಗ ನವೆಂಬರ್ 12ರಂದು ಕುಸಿದು 41 ಮಂದಿ ಸಿಲುಕಿಕೊಂಡಿದ್ದರು. ರಂಧ್ರಗಳನ್ನು ಕೊರೆದು ಅವರನ್ನು ಸುರಕ್ಷಿತವಾಗಿ ಹೊರತರುವ ನಡೆಯುತ್ತಿರುವ ನಡುವೆಯೇ ಮತ್ತೆ ಮತ್ತೆ ಕುಸಿತಗಳು ಸಂಭವಿಸುತ್ತಿರುವುದು ಕಾರ್ಯಾಚರಣೆಗೆ ತಡೆಯಾಗಿದೆ. ಈ ಹಿನ್ನೆಲೆಯಲ್ಲಿ ರಂಧ್ರ ಕೊರೆದು ದೊಡ್ಡ ಪೈಪ್‌ಗಳ ಮೂಲಕ ಕಾರ್ಮಿಕರನ್ನು ಹೊರತರುವ ಪ್ರಯತ್ನ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X