ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾದ ಶೆನ್ನಿಸ್ ಪಲಾಸಿಯೋಸ್

Date:

Advertisements

ನಿಕರಾಗುವಾ ದೇಶದ ಶೆನ್ನಿಸ್ ಪಲಾಸಿಯೋಸ್ ಅವರು ಮಿಸ್ ಯೂನಿವರ್ಸ್ 2023 ಆಗಿ ಆಯ್ಕೆಯಾಗಿದ್ದಾರೆ.  ಎಲ್ ಸಾಲ್ವಡಾರ್‌ನ ಸ್ಯಾನ್ ಸಾಲ್ವಡಾರ್‌ನಲ್ಲಿರುವ ಜೋಸ್ ಅಡಾಲ್ಫೊ ಪಿನೆಡಾ ಅರೆನಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ.

2022 ರ ಮಿಸ್ ಯೂನಿವರ್ಸ್ ಅಮೆರಿಕದ ಆರ್ ಬೊನ್ನಿ ಗೇಬ್ರಿಯಲ್ ಅವರು ಶೆನ್ನಿಸ್ ಪಲಾಸಿಯೋಸ್ ಅವರಿಗೆ ಕಿರೀಟ ತೊಡಿಸಿದರು. ಮಿಸ್ ಯೂನಿವರ್ಸ್ ಗೆದ್ದ ಮೊದಲ ನಿಕರಾಗುವಾ ಮಹಿಳೆ ಎಂಬ ಹೆಗ್ಗಳಿಕೆಗೆ ಶೆನ್ನಿಸ್ ಪಲಾಸಿಯೋಸ್ ಪಾತ್ರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

Advertisements

ಈ ಸ್ಪರ್ಧೆಯಲ್ಲಿ ಆಸ್ಟ್ರೇಲಿಯಾದ ಮೊರಾಯಾ ವಿಲ್ಸನ್ ಎರಡನೇ ರನ್ನರ್ ಅಪ್ ಆಗಿದ್ದರೆ, ಥಾಯ್ಲೆಂಡ್‌ನ ಆಂಟೋನಿಯಾ ಪೋರ್ಸಿಲ್ಡ್ ಮೊದಲ ರನ್ನರ್ ಅಪ್ ಕಿರೀಟವನ್ನು ಪಡೆದರು.

ಈ ವರ್ಷ, ಚಂಡೀಗಢ ಮೂಲದ ಶ್ವೇತಾ ಶಾರದಾ ಭಾರತವನ್ನು ಪ್ರತಿನಿಧಿಸಿದ್ದರು. ಅವರು ಅಗ್ರ 20ರಲ್ಲಿ ಸ್ಥಾನ ಪಡೆದಿದ್ದರು. ಆದರೆ ಅಗ್ರ 10ರಲ್ಲಿ ಸ್ಥಾನ ಪಡೆಯಲು ಅವರು ವಿಫಲರಾದರು.

ಈ ವರ್ಷ, ಪಾಕಿಸ್ತಾನವು ಮೊದಲ ಬಾರಿಗೆ ಮಿಸ್ ಯೂನಿವರ್ಸ್‌ನಲ್ಲಿ ಭಾಗವಹಿಸಿತ್ತು. ಈ ವರ್ಷ ನಡೆದ 72ನೇ  ಸ್ಪರ್ಧೆಯಲ್ಲಿ 84 ದೇಶಗಳು ಮತ್ತು ಪ್ರಾಂತ್ಯಗಳ ಸ್ಪರ್ಧಿಗಳು ಸ್ಪರ್ಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X