ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಬಹುದಿನಗಳ ಮಹತ್ವಾಕಾಂಕ್ಷೆಯಾಗಿದ್ದ ಪ್ರತ್ಯೇಕ ನಿವೇಶನ(ಸಿಎ) ದೊರಕಿಸಿಕೊಳ್ಳಬೇಕೆಂಬ ಆಸೆ ಕೊನೆಗೂ ಕೈಗೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಸಂಘಕ್ಕೆ ಹಸ್ತಾಂತರ ಮಾಡಿದರು.
ಸಂಘದ ಅಧ್ಯಕ್ಷ ಎಸ್ ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಎಲ್ಲ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರ ಅವಿರತ ಶ್ರಮದ ಫಲವಾಗಿ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಚಾಮುಂಡಿ ಬೆಟ್ಟದ ತಪ್ಪಲಿನ ಕೆಎನ್‌ಎಸ್ ಬಡಾವಣೆಯಲ್ಲಿ ಮಂಜೂರಾಗಿರುವ ಸಿಎ ನಿವೇಶನದ ಮಂಜೂರಾತಿ ಪತ್ರವನ್ನು ಶನಿವಾರ ಸಂಜೆ ಕಲಾಮಂದಿರದಲ್ಲಿ ಸಂಘಕ್ಕೆ ಹಸ್ತಾಂತರಿಸಿದರು.
ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ, ನಗರ ಉಪಾಧ್ಯಕ್ಷ ಎಂ.ಎಸ್. ಬಸವಣ್ಣ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್, ನಗರ ಕಾರ್ಯದರ್ಶಿ ರಂಗಸ್ವಾಮಿ, ಖಜಾಂಚಿ ನಾಗೇಶ್ ಪಾಣತ್ತಲೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ. ರಾಘವೇಂದ್ರ, ಕಾರ್ಯಕಾರಿ ಸಮಿತಿ ಸದಸ್ಯ ಆರ್. ಕೃಷ್ಣ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಯವರಿಂದ ಸ್ವೀಕರಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿ ಯೋಜನೆಗಳ ಪ್ರಗತಿ ಕುಂಠಿತ; ಗಂಭೀರವಾಗಿ ಪರಿಗಣಿಸುವಂತೆ ಎಚ್ಚರಿಕೆ
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಇದ್ದರು.