ವಿಜಯಪುರ | ಕೂಡಲೇ ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿ; ಮಹಿಳೆಯರ ಮನವಿ

Date:

Advertisements

ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಾರಾಯಿ ಅಂಗಡಿಗಳು ಹೆಚ್ಚಾಗಿದ್ದು, ಕೂಡಲೇ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸಂಘಟನೆಯ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಹಿಳೆಯರು, ಅಕ್ರಮ ಸರಾಯಿ ಮಾರಾಟದಿಂದ ಗ್ರಾಮದ ಹಲವು ಜನರು ಕುಡಿತಕ್ಕೆ ಒಳಗಾಗಿ, ಕುಟುಂಬಗಳನ್ನು ಬೀದಿಗೆ ತಳ್ಳುತ್ತಿದ್ದಾರೆ. ಯುವಕರು ಶಿಕ್ಷಣದ ಬಗ್ಗೆ ಗಮನ ಹರಿಸದೆ ಕುಡಿತದ ದಾಸರಾಗಿದ್ದಾರೆ. ಮಹಿಳೆಯರು, ವೃದ್ಧರು ಎನ್ನದೇ ಸಾರಾಯಿ ಅಮಲಿನಲ್ಲಿ ಅಸಹ್ಯಕರವಾಗಿ ನಡೆದುಕೊಳ್ಳುತ್ತಿದ್ದಾರೆ. ಕುಡುಕರು ಅಂಬೇಡ್ಕರ್ ಭವನದ ಮುಂದೆ ಮೂತ್ರ ವಿಸರ್ಜನೆ ಮಾಡುವುದು, ಸಾರಾಯಿ ಬಾಟಲಿಗಳನ್ನು ಎಸೆಯುವುದು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗಲೀಜು ಮಾಡಿದ್ದರ ಬಗ್ಗೆ ಕೇಳಿದರೆ ಜಗಳಕ್ಕೆ ಬರುತ್ತಾರೆ. ಅಕ್ರಮ ಸಾರಾಯಿ ಅಂಗಡಿಗಳಿಂದ ಗ್ರಾಮದಲ್ಲಿ ಅಶಾಂತತೆ ವಾತಾವರಣ ನಿರ್ಮಾಣವಾಗಿದೆ. ಮಹಿಳೆಯರಿಗೆ ಗ್ರಾಮದಲ್ಲಿ ರಕ್ಷಣೆ ಇಲ್ಲದಂತಾಗಿದೆ. ನಶೆಯಲ್ಲಿ ಮಹಿಳೆಯರಿಗೆ ಅಸಭ್ಯವಾಗಿ ಬಯ್ಯುತ್ತಿದ್ದಾರೆ. ಬಬಲಾದ ಗ್ರಾಮ ಮಾದರಿ ಗ್ರಾಮವಾಗಿ ಬದಲಾಗುವಂತಾಗಲು ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿ ಎಂದು ಮಹಿಳೆಯರು ಮನವಿ ಮಾಡಿದ್ದಾರೆ.

Advertisements

ಈ ಸಂದರ್ಭದಲ್ಲಿ ಐ.ಎಸ್. ಹೊಸಮನಿ, ಮಹಾದೇವಿ ಶಿವಶರಣ, ಸುರೇಖಾ ಶಿವಶರಣ, ಯಲ್ಲಭಾಯಿ ಉಕಲಿ, ಇಂದು ಹೊಸಮನಿ, ಡಾ. ಭುವನೇಶ್ವರಿ, ನೀಲಾಬಾಯಿ ಬನಸೋಡೆ, ಲಲಿತಾ ದಶವಂತ್, ಕನ್ನಾಬಾಯಿ ಹರಿಜನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X