ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ
ಗುಜರಾತ್ನ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ದೊಡ್ಡ ಆಘಾತ ಎದುರಿಸಿದೆ. ಈಗಾಗಲೇ ಪ್ರಮುಖ ಮೂರು ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಟೀಮ್ ಇಂಡಿಯಾ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟಿದೆ.
ಮಿಚೆಲ್ ಸ್ಟಾರ್ಕ್ ಎಸೆದ 5ನೇ ಓವರ್ನ 2ನೇ ಎಸೆತದಲ್ಲಿ ಮಿಡ್ ಆನ್ನಲ್ಲಿದ್ದ ಆ್ಯಡಂ ಝಂಪಾಗೆ ಕ್ಯಾಚ್ ನೀಡುವ ಮೂಲಕ 7 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿದ್ದ ಆರಂಭಿಕ ಆಟಗಾರ ಶುಭಮನ್ ಗಿಲ್ ಔಟಾದರು. ಆ ಮೂಲಕ ಆಸ್ಟ್ರೇಲಿಯಾ ತಂಡ ಮೊದಲ ಯಶಸ್ಸು ಪಡೆಯಿತು.
WELL PLAYED, ROHIT SHARMA….!!!!
Another fifty missed due to attacking cricket – 47 (31) with 4 fours and 3 sixes. A great start given by Rohit. pic.twitter.com/AxQNgAYvM1
— Mufaddal Vohra (@mufaddal_vohra) November 19, 2023
47 ರನ್ ಗಳಿಸಿ ಉತ್ತಮ ಪ್ರದರ್ಶನ ತೋರುತ್ತಿದ್ದ ನಾಯಕ ರೋಹಿತ್ ಶರ್ಮಾ ಮ್ಯಾಕ್ ವೆಲ್ ಬೌಲಿಂಗ್ ನಲ್ಲಿ ಔಟ್ ಆದರು. ಮ್ಯಾಕ್ಸ್ವೆಲ್ ಎಸೆದ 10ನೇ ಓವರ್ನ 4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದ ರೋಹಿತ್ ಶರ್ಮಾ, ಟ್ರಾವಿಸ್ ಹೆಡ್ ಅದ್ಭುತ ರನ್ನಿಂಗ್ ಕ್ಯಾಚ್ಗೆ ಬಲಿಯಾದರು. 31 ಎಸೆತಗಳನ್ನು ಎದುರಿಸಿದ್ದ ರೋಹಿತ್ ಶರ್ಮಾ, 4 ಬೌಂಡರಿ ಹಾಗೂ ಮೂರು ಸಿಕ್ಸರ್ನ ನೆರವಿನಿಂದ 47 ರನ್ ಗಳಿಸಿದರು.
Shreyas Iyer falls for four ❌
Wickets in consecutive overs for Australia; India are three down!https://t.co/uGuYjoOWie #CWC23 #CWC23Final #INDvAUS pic.twitter.com/VeHzcKpCOU
— ESPNcricinfo (@ESPNcricinfo) November 19, 2023
ನಂತರ ಕ್ರೀಸ್ಗೆ ಬಂದ ಶ್ರೇಯಸ್ ಅಯ್ಯರ್ ಕೇವಲ 4 ರನ್ ಗಳಿಸಿ, ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ನಲ್ಲಿ ಪೆವಿಲಿಯನ್ ಸೇರಿದರು.
ಪ್ರಸ್ತುತ 19 ಓವರ್ಗಳು ಮುಗಿದಿದ್ದು, ಭಾರತ 113 ರನ್ ಮಾಡಿದೆ. ಸದ್ಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 39*, ರಾಹುಲ್ 18* ರನ್ ಗಳಿಸಿ, ಕ್ರೀಸ್ನಲ್ಲಿದ್ದಾರೆ.
ಈ ಬಾರಿಯ ವಿಶ್ವಕಪ್ನ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಆರಂಭಿಕ ಪಂದ್ಯದಲ್ಲಿ ಕೊಹ್ಲಿ-ರಾಹುಲ್ ಜೋಡಿ ಉತ್ತಮ ಜೊತೆಯಾಟ ನಡೆಸಿದ ಪರಿಣಾಮ ಸೋಲನುಭವಿಸುವುದನ್ನು ತಪ್ಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.