ಯುಪಿ: ಗೋಹತ್ಯೆ ಆರೋಪಿ ಎನ್‌ಕೌಂಟರ್‌ನಲ್ಲಿ ಬಲಿ

Date:

Advertisements

ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ  ಗೋಹತ್ಯೆ ಆರೋಪಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಪಟ್ವಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಹತ್ಯೆ ಪ್ರಕರಣದ ತನಿಖೆ ನಡೆಸಲಾಗುತ್ತಿತ್ತು. ಆರೋಪಿಗಳು ಶನಿವಾರ ತಡರಾತ್ರಿ ಮೊರಾದಾಬಾದ್‌ಗೆ ವಾಹನದಲ್ಲಿ ಬರುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ಬಂದಿತ್ತು ಎಂದು ರಾಂಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಹೇಳಿದ್ದಾರೆ.

ಪಟ್ವಾಯಿ ಪೊಲೀಸರು ಚೆಕ್‌ಪಾಯಿಂಟ್ ತೆರೆದಿದ್ದರು. ಕಾರುಗಳನ್ನು ಪರಿಶೀಲಿಸುವ ವೇಳೆ ಮೊರಾದಾಬಾದ್‌ನಿಂದ ಅತಿವೇಗದಲ್ಲಿ ವಾಹನ ಬರುತ್ತಿರುವುದನ್ನು ಗಮನಿಸಲಾಯಿತು. ಚೆಕ್‌ಪಾಯಿಂಟ್ ನೋಡಿದ ನಂತರ, ಕಾರನ್ನು ಹಿಂದಕ್ಕೆ ತಿರುಗಿಸಲಾಯಿತು. ಪೊಲೀಸರು ಚೇಸ್ ಮಾಡಿದರು ಎಂದು ಅಧಿಕಾರಿ ವಿವರಿಸಿದ್ದಾರೆ.

Advertisements

ಚಾಲಕನ ನಿಯಂತ್ರಣ ತಪ್ಪಿದ ಕಾರು ಮಿಲಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಲ್ಟಿಯಾಗಿತ್ತು. ಇಬ್ಬರು ಆರೋಪಿಗಳು ಕಾರಿನಿಂದ ಹೊರಬಂದು ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಪೊಲೀಸರು ಪ್ರತಿ ದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಆರೋಪಿಗಳು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಸಾಜಿದ್ (23) ಎಂಬವರು ಮೃತಪಟ್ಟಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಮತ್ತೋರ್ವ ಆರೋಪಿ ಬಬ್ಲು ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಜಿದ್ ಮತ್ತು ಬಬ್ಲು ಇಬ್ಬರೂ ಮೊರಾದಾಬಾದ್ ನಿವಾಸಿಗಳಾಗಿದ್ದು, ಹಲವು ಅಪರಾಧ ಪ್ರಕರಣಗಳು ಅವರ ಮೇಲಿವೆ ಎಂದು ದ್ವಿವೇದಿ ಹೇಳಿದ್ದಾರೆ.

ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಾರು, ಪಿಸ್ತೂಲ್‌ಗಳು, ಮದ್ದುಗುಂಡುಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಗೋಹತ್ಯೆಗೆ ಬಳಸಿದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X