ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪಟೇಲವಾಡಿಯಲ್ಲಿ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದ ಪತ್ನಿಯನ್ನು ಆಕೆಯ ಪತಿ ನೇಣು ಬಿಗಿದು ಹತ್ಯೆಗೈದಿರುವ ಘಟನೆ ನಡೆದಿದೆ.
ಭುವನೇಶ್ವರಿ (31) ಕೊಲೆಯಾದ ಮಹಿಳೆ. ಆರೋಪಿ ನಾಗರಾಜ ಹತ್ಯೆಗೈದ ಪತಿ ಎಂದು ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಹೊಸಳ್ಳಿ ಇಜೆ ಗ್ರಾಮದ ನಾಗರಾಜ ಹಾಗೂ ಭುವನೇಶ್ವರಿ ಕಳೆದ 14 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಸಿಂಧನೂರಿನ ಪಟೇಲವಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಕಳೆದ ಏಳೆಂಟು ವರ್ಷಗಳಿಂದ ನಾಗರಾಜ ಪ್ರತಿನಿತ್ಯ ಮದ್ಯ ಸೇವಿಸಿ ಪತ್ನಿಗೆ ಹೊಡೆದು ಮಾನಸಿಕ ಕಿರುಕುಳ ನೀಡುತ್ತಿದ್ದರು. ಶುಕ್ರವಾರ ರಾತ್ರಿ ನಾಗರಾಜ ಭುವನೇಶ್ವರಿಗೆ ಹೊಡೆದಿದ್ಧಾನೆ. ಆಕೆ ಪ್ರಜ್ಞೆ ತಪ್ಪಿ ಬಿದ್ದಾಗ ಕೊರಳಿಗೆ ನೇಣು ಬಿಗಿದು ಕೊಲೆ ಮಾಡಿದ್ದಾರೆ ಎಂದು ಮೃತಳ ಪೋಷಕರು ದೂರು ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕವಿಗೋಷ್ಠಿಗೆ ಬಂದಿದ್ದ ಕೆನಡಾದ ಕವಿ ಹೃದಯಾಘಾತದಿಂದ ನಿಧನ
ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.