ಬೀದರ್‌ | ನ.25, 26ರಂದು ನಡೆಯಲಿರುವ ಅನುಭವ ಮಂಟಪ ಉತ್ಸವದಲ್ಲಿ ಭಾಗವಹಿಸಿ : ಗುರುಬಸವ ಪಟ್ಟದ್ದೇವರು

Date:

Advertisements

ಬಸವಕಲ್ಯಾಣದಲ್ಲಿ ನ.25 ಮತ್ತು 26ರಂದು ವಿಶ್ವ ಬಸವ ಧರ್ಮ ಟ್ರಸ್ಟ್‌ ಅನುಭವ ಮಂಟಪ ವತಿಯಿಂದ ನಡೆಯಲಿರುವ 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, “ಜಗತ್ತಿಗೆ ಪ್ರಪ್ರಥಮ ಸಂಸತ್ತು ಪರಿಕಲ್ಪನೆ ನೀಡಿದ ಹೆಗ್ಗಳಿಕೆ  ಕಲ್ಯಾಣದ ನೆಲಕ್ಕಿದೆ. ಜತೆಗೆ ಅಸ್ಪೃಶ್ಯತೆ, ಮೌಢ್ಯತೆ, ಕಂದಾಚಾರ ವಿರುದ್ಧ ಹೋರಾಡಿ ಸಮಸಮಾಜ ನಿರ್ಮಾಣಕ್ಕೆ ಶರಣರು ಹೋರಾಡಿದರು. ಅಂತಹ ಶರಣರ ವಿಚಾರಧಾರೆ ಜಾಗತಿಕ ಮಟ್ಟದಲ್ಲಿ ಪರಿಚಯಿಸಬೇಕೆಂಬ ಉದ್ದೇಶದಿಂದ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಪ್ರತಿವರ್ಷ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಆಯೋಜಿಸಲಾಗುತ್ತಿದೆ” ಎಂದರು.

“ನ.25 ಮತ್ತು 26 ರಂದು ಬಸವಕಲ್ಯಾಣದಲ್ಲಿ ಎರಡು ದಿವಸ ಅರ್ಥಪೂರ್ಣ ಕಾರ್ಯಕ್ರಮ ಜರುಗಲಿವೆ. ನಾಡಿನ ಮಠಾಧೀಶರು, ರಾಜಕೀಯ ಮುಖಂಡರು, ಸಾಹಿತಿಗಳು ಭಾಗಿಯಾಗಲಿದ್ದಾರೆ. ಆದ್ದರಿಂದ ತಾಲೂಕಿನ ಬಸವ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಎರಡು ದಿನದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಸಲಿ ರಾಷ್ಟ್ರೀಯವಾದಿ ಚಳವಳಿ ಹುಟ್ಟು ಹಾಕಿದ್ದು ಬಸವಣ್ಣ: ಡಾ. ಜೆ.ಎಸ್ ಪಾಟೀಲ್

ಈ ಸಂದರ್ಭದಲ್ಲಿ ಪ್ರಮುಖರಾದ ಬಸವರಾಜ ದಾಡಗೆ, ಶಾಂತವೀರ ಕೇಸ್ಕರ್, ಕಾಶಿನಾಥ ಲದ್ದೆ, ಮಹಾದೇವ ಬೇಲೂರೆ, ಬಾಬುರಾವ ಬೇಲೂರೆ, ಸಂಗಮೇಶ ಟೆಂಕಾಳೆ, ಕೈಲಾಸ ಪಾಟೀಲ್,  ಮಲ್ಲಿಕಾರ್ಜುನ ಗುಮ್ತಾ, ಅಮೃತ ಹೂಗಾರ, ಗೋವಿಂದ ಅಹ್ಮದಾಬಾದೆ, ಗುರುರಾಜ ಸ್ವಾಮಿ, ಬಾಲಾಜಿ ಕುಟಮಲಗೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X