ವಿಜಯಪುರ | ವಸತಿ ನಿಲಯ ನಿರ್ಮಾಣಕ್ಕೆ ದಲಿತ ವಿದ್ಯರ್ಥಿ ಪರಿಷತ್ ಒತ್ತಾಯ

Date:

Advertisements

ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಕ್ಯಾಂಪಸ್ ನಲ್ಲಿ ಎಸ್ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಹೆಚ್ಚುವರಿ ವಸತಿ ನಿಲಯವನ್ನು ವಿಶೇಷ ಅನುದಾನದಲ್ಲಿ ಮಂಜೂರು ಮಾಡಲು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಿಎಂ ಸಿದ್ದರಮಯ್ಯನವರಿಗೆ ಮನವಿ ಸಲ್ಲಿಸಿದರು.

ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿನಿಯರು ಓದುವುದಕ್ಕೆ ಬರುತ್ತಾರೆ. ಇವರಿಗೆ ಆಶ್ರಯವಾಗಿ ಸರ್ಕಾರದ ವಸತಿ ನಿಲಯಗಳು ಕಾರ್ಯ ಮಾಡುತ್ತಿವೆ. ಇದ್ದ ವಸತಿನಿಲಯಗಳು ಭರ್ತಿಯಾಗಿವೆ. ಇನ್ನೂ ಅನೇಕ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿ 500 ಜನ ವಿದ್ಯಾರ್ಥಿನಿಯರ ನೂತನ ವಸತಿ ನಿಲಯದ ಅವಶ್ಯಕತೆ ತುಂಬಾ ಇದೆ ಮತ್ತು ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಇನ್ನು ಹೆಚ್ಚುವರಿ ವಸತಿ ನಿಲಯಗಳನ್ನು ಮಂಜೂರು ಮಾಡಬೇಕು. ಈಗಾಗಲೇ ಕೊರೋನದಂತಹ ಮಹಾಮಾರಿಯಿಂದ ಪಾಲಕರು ದುಡಿಮೆ ಇಲ್ಲದೇ ಕಂಗಾಲಾಗಿದ್ದಾರೆ. ಬಡ ವಿದ್ಯಾರ್ಥಿಗಳು ರೂಮ್ ಮಾಡಿ ವಿದ್ಯಾಭ್ಯಾಸ ಮಾಡುವಷ್ಟು ಆರ್ಥಿಕವಾಗಿ ಸದೃಢರಾಗಿಲ್ಲ.

Advertisements

ಆದ್ದರಿಂದ ತಾವುಗಳು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಹೆಚ್ಚುವರಿ ವಸತಿ ನಿಲಯಗಳನ್ನ ಮಂಜೂರು ಮಾಡುವುದರಿಂದ ವಸತಿ ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಓದಲು ಅನುಕೂಲ ಮಾಡಿಕೊಡಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಆದೇಶ ಹೊರಡಿಸಬೇಕೆಂದು ಮುಖ್ಯಮಂತ್ರಿಯವರ ಹತ್ತಿರ ಮನವಿ ಮಾಡಿದರೂ.

ಈ ಸಂದರ್ಭದಲ್ಲಿ ಸುಮಾ ತಡವಲಕರ, ಮಾದೇಶ್ ಛಲವಾದಿ, ಸಂತೋಷ್, ಹಣಮಂತ, ಸುರೇಶ್, ಪ್ರಜ್ವಲ್ ಮುಂತಾದವರು ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X