ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆ 7 ಗಂಟೆಗೆ ಎರಡು ಇನೋವಾ ಕಾರ್‌ನಲ್ಲಿ ಬಂದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ಅಪಾರ್ಟ್ ಮೆಂಟ್ ಮೇಲೆ 6 ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ನಾನಾಕಡೆ ಡ್ರೈ ಫ್ರೂಟ್ಸ್ ವ್ಯಾಪಾರಸ್ಥರ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ದಾಳಿಯಾಗಿತ್ತು. ಭೂ ಮಾಪನ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದ ಹಿನ್ನೆಲೆ, ನವೆಂಬರ್ 20ರಂದು ಬೆಂಗಳೂರಿನ 11 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ದಾಖಲೆ ಪರಿಶೀಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಮುರುಘಾ ಬಂಧನಕ್ಕೆ ತಡೆ; ಬಿಡುಗಡೆಗೆ ಹೈಕೋರ್ಟ್ ಸೂಚನೆ
ಭೂದಾಖಲೆ ನಿರ್ದೇಶಕರ ಕಚೇರಿ (ಡಿಡಿಎಲ್‌ಆರ್) ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ (ಎಡಿಎಲ್‌ಆರ್)ಗಳಲ್ಲಿ ಲೋಕಾಯುಕ್ತ ಕಾರ್ಯಾಚರಣೆ ಕೈಗೊಂಡಿತ್ತು.