ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.22 ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿ ‘ಬೆಂಗಳೂರು ಚಲೋ’ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಈ ಧರಣಿ ನಡೆಯಲಿದೆ.
ಬೆಂಗಳೂರಿನಲ್ಲಿ ಒಟ್ಟು 2,877 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1,198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಹುದ್ದೆಗಳ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿಗೆ ಪ್ರಕಟಣೆ ಹೊರಡಿಸಿದರೂ, ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದು ಅಂಗನವಾಡಿ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾದ ‘ಬೆಂಗಳೂರು ವಿಶ್ವವಿದ್ಯಾಲಯ’ಕ್ಕೇ ಇಲ್ಲ ಬೆಳಕು
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳೇನು?
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಕೂಡಲೇ ಆಗಬೇಕು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು. ಅಂಗನವಾಡಿ ಸಹಾಯಕಿಯರನ್ನು ಆಫ್‌ಲೈನ್ ಮುಖಾಂತರ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದೆ ಇಟ್ಟಿದ್ದಾರೆ.