ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಯುತ್ತಿದೆ. ಈಗಾಗಲೇ ಸಭೆಗಳನ್ನು ನಡೆಸುತ್ತಿದ್ದೇವೆ. ನನಗೂ ಕೂಡ ಸಂಸತ್ತಿಗೆ ಹೋಗಬೇಕೆಂಬ ಆಸೆ ಇದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೆಲವು ಸಚಿವರು ಸ್ಪರ್ಧಿಸಬೇಕೆಂಬ ಆಸೆ ಹೊಂದಿದ್ದಾರೆ. ನನಗೂ ಕೂಡ ಪಾರ್ಲಿಮೆಂಟ್‌ಗೆ ಹೋಗಬೇಕೆಂಬ ಆಸೆ ಇದೆ” ಎಂದು ಹೇಳಿದ್ದಾರೆ.
“2028ರ ವಿಧಾನಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಜನರ ಬದುಕಿನ ಬಗ್ಗೆ ಯೋಜಿಸುತ್ತಿದೆ” ಎಂದು ಅವರು ಹೇಳಿದ್ದಾರೆ.
“ಬಿಜೆಪಿಗರು ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದರು. ಈಗ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.