ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ `ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು’ ಎಂದು ಸೌತೆಕಾಯಿ ಕೊಟ್ಟು ಆಶೀರ್ವದಿಸಿ ಗಮನ ಸೆಳೆದಿದ್ದ ಶಾರದಮ್ಮ(70) ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಬಸ್ ನಿಲ್ದಾಣದಲ್ಲಿ ಸೌತೆಕಾಯಿ ಮಾರಾಟ ಮಾಡುತ್ತಿದ್ದ ಶಾರದಮ್ಮ ಅವರನ್ನು ರಾಹುಲ್‌ಗಾಂಧಿ ಗುರುತಿಸಿ ಜತೆಯಲ್ಲಿ ಫೋಟೋ ತೆಗೆಸಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಯುವ ರೈತ ಆತ್ಮಹತ್ಯೆ, ನ್ಯಾಯಕ್ಕಾಗಿ ರೈತ ಸಂಘದ ಪ್ರತಿಭಟನೆ
ಚಿಕ್ಕನಾಯಕನಹಳ್ಳಿ ಸಮೀಪದ ಜೋಗಿಹಳ್ಳಿಯ ಶಾರದಮ್ಮ ವಯೋಸಹಜ ಅನಾರೋಗ್ಯದಿಂದ ಕೆಲವು ದಿನಗಳಿಂದ ಬಳಲುತ್ತಿದ್ದರು.