ಬೆಳಗಾವಿ ಅಧಿವೇಶನ | ಶಾಸಕರ ವಾಸ್ತವ್ಯಕ್ಕಾಗಿ 300 ಕೋಟಿ ರೂ. ವೆಚ್ಚದಲ್ಲಿ ಹೋಟೆಲ್ ನಿರ್ಮಾಣ

Date:

Advertisements

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ಶಾಸಕರ ವಾಸ್ತವ್ಯಕ್ಕಾಗಿ ಬೆಳಗಾವಿಯಲ್ಲಿ ಪಂಚತಾರಾ ಹೋಟೆಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಸುವರ್ಣಸೌಧದ ಸಮೀಪದ ಸರ್ಕಾರಿ ಜಾಗದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಹೋಟೆಲ್ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ.

ಪ್ರತಿವರ್ಷ ಬೆಳಗಾವಿ ಅಧಿವೇಶನದ ವೇಳೆ ಶಾಸಕರ ವಾಸ್ತವ್ಯಕ್ಕಾಗಿ ಕೋಟಿಗಟ್ಟಲೆ ಹಣ ವೆಚ್ಚವಾಗುತ್ತದೆ. ಆ ವೆಚ್ಚವನ್ನು ತಗ್ಗಿಸಲು ಪಂಚತಾರಾ ಹೋಟೆಲ್ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ.

2018ರಿಂದ ಇಲ್ಲಿಯವರೆಗೆ ಬೆಳಗಾವಿಯಲ್ಲಿ ನಡೆದಿರುವ ಅಧಿವೇಶನಕ್ಕೆ ನೂರಾರು ಕೋಟಿ ರೂ. ವೆಚ್ಚವಾಗಿದೆ. ಕಳೆದ ವರ್ಷ ಸುಮಾರು 37 ಕೋಟಿ ರೂ. ವೆಚ್ಚವಾಗಿತ್ತು.‌ ಈ ವರ್ಷ 40 ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದಿನ ಕಳೆದಂತೆ ಬೆಲೆ ಏರಿಕೆಯಿಂದಾಗಿ ಅಧಿವೇಶನದ ವೆಚ್ಚವೂ ಹೆಚ್ಚುತ್ತಿದೆ. ಹೀಗಾಗಿ, ಬೆಳಗಾವಿಯಲ್ಲಿ ಹೋಟೆಲ್ ನಿರ್ಮಿಸುವುದರಿಂದ ಶಾಸಕರ ವಾಸ್ತವ್ಯದ ವೆಚ್ಚವನ್ನು ತಗ್ಗಿಸಬಹುದು ಎಂದು ಸರ್ಕಾರ ಭಾವಿಸಿದೆ.

Advertisements

ಅಧಿವೇಶನದ ವೇಳೆ ಶಾಸಕರು, ಅದಿಕಾರಿಗಳು, ಸಿಬ್ಬದಿಗಳಿಗಾಗಿ ಸುಮಾರು 2,000 ಹೋಟೆಲ್‌ ಕೊಠಡಿಗಳು ಬೇಕಾಗುತ್ತವೆ ಎಂದು ಹೇಳಲಾಗಿದೆ. ಅದಕ್ಕಾಗಿ, ಬೆಳಗಾವಿಯ ಎಲ್ಲ ಹೊಟೇಲ್ ಹಾಗೂ ರೆಸಾರ್ಟ್​ಗಳನ್ನು ಶಾಸಕರು ಮತ್ತು ಅಧಿಕಾರಿಗಳ ವಾಸ್ತವ್ಯಕ್ಕಾಗಿ ಜಿಲ್ಲಾಡಳಿತ ವಶಕ್ಕೆ ಪಡೆಯುತ್ತದೆ. ಆ ಎಲ್ಲ ವಾಸ್ತವ್ಯಗಳಿಗೂ ಬಾಡಿಗೆ ಭರಿಸುತ್ತದೆ.

2022ರಲ್ಲಿ ಬೆಳಗಾವಿಯ ಸುಮಾರು 80 ಹೊಟೇಲ್​ಗಳನ್ನು ವಾಸ್ತವ್ಯಕ್ಕಾಗಿ ಬಳಸಲಾಗಿತ್ತು. ಅವುಗಳಲ್ಲಿ 67 ಐಷಾರಾಮಿ ಹೊಟೇಲ್​ಗಳಿದ್ದವು. ಸರ್ಕಾರವು ಅಧಿವೇಶನದ ವೇಳೆ ಒಬ್ಬ ಶಾಸಕನಿಗೆ ಸರಾಸರಿ ಸುಮಾರು 10-12 ಲಕ್ಷ ರೂ. ಖರ್ಚು ಮಾಡುತ್ತದೆ ಎಂದು ತಿಳಿದುಬಂದಿದೆ.

“ಸುವರ್ಣಸೌಧದ ಬಳಿಯ 10 ಎಕರೆ ಸರ್ಕಾರಿ ಭೂಮಿಯಲ್ಲಿ ಹೋಟೆಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಪಿಪಿಪಿ (ಖಾಸಗಿ-ಸರ್ಕಾರಿ ಸಹಭಾಗಿತ್ವ) ಮಾದರಿಯಲ್ಲ ಹೋಟೆಲ್ ನಿರ್ಮಾಣವಾಗಲಿದೆ. ಭೂಮಿ ಸರ್ಕಾರದ್ದಾಗಿದ್ದು, ಖಾಸಗಿ ಕಂಪನಿ ಹೋಟೆಲ್ ನಿರ್ಮಾಣ ಮಾಡಲಿದೆ. 30 ವರ್ಷಗಳ ಕಾಲ ಖಾಸಗಿಯವರಿಗೆ ಹೋಟೆಲ್‌ಅನ್ನು ಗುತ್ತಿಗೆ ನೀಡಲಾಗುತ್ತದೆ. ಅಧಿವೇಶನ ವೇಳೆ ಹೊಟೇಲ್‌ಅನ್ನು ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕಾಗಿ ಸೀಮಿತಗೊಳಿಸಲಾಗುತ್ತದೆ. ಉಳಿದ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ಲಭ್ಯವಾಗಿರುತ್ತದೆ” ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

Download Eedina App Android / iOS

X