ಕಂಬಳ ವಿವಾದ | ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜ್ ಭೂಷಣ್ ಆಗಮನ ರದ್ದು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯಲಿರುವ ಕಂಬಳಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ, ಬ್ರಿಜ್ ಭೂಷಣ್ ಆಗಮನವನ್ನು ಕಂಬಳ ಸಮಿತಿಯು ರದ್ದುಪಡಿಸಿದೆ.

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ಕರಾವಳಿಯ ಪ್ರಸಿದ್ಧ ಕಂಬಳಕ್ಕೆ ರಾಜ್ಯ ರಾಜಧಾನಿ ಸಜ್ಜಾಗುತ್ತಿದೆ. ಈ ನಡುವೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿದ್ದು ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆದಿರುವುದು ಎಷ್ಟು ಸರಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದವು. ಸದ್ಯ ಈಗ ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಬ್ರಿಜ್ ಭೂಷಣ್ ಪತ್ರ ಬರೆದು ತಿಳಿಸಿದ್ದಾರೆ. ಬ್ರಿಜ್ ಭೂಷಣ್ ಕಂಬಳಕ್ಕೆ ಆಗಮಿಸುವ ಬಗ್ಗೆ ಖಾತ್ರಿ ನೀಡಿರಲಿಲ್ಲ ಎಂದು ಕಂಬಳ ಸಮಿತಿ ಮುಖ್ಯಸ್ಥ ಅಶೋಕ್ ಕುಮಾರ್ ರೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Advertisements

ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾರತದ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಅತಿಥಿಯಾಗಿ ಆಹ್ವಾನ ನೀಡಲು ಕುಸ್ತಿ ಅಸೋಸಿಯೇಷನ್ ಹಾಗೂ ಸಿದ್ದಿ ಜನಾಂಗ ಮನವಿ ಮಾಡಿತ್ತು. ಮನವಿ ಮೇರೆಗೆ ಕಂಬಳ ಸಮಿತಿ ಆಹ್ವಾನ ನೀಡಿತ್ತು. ಈ ಸಂಬಂಧ ವಿರೋಧ ಹಿನ್ನಲೆ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ ಕಂಬಳ ಸಮಿತಿ ವಿವರ ನೀಡಿದ್ದು ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಪತ್ರ ಬರೆದು ಬ್ರಿಜ್ ಭೂಷಣ್ ಶುಭಾಶಯ ತಿಳಿಸಿದ್ದಾರೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ ಮಾಹಿತಿ‌ ನೀಡಿದ್ದು, ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬ್ರಿಜ್ ಭೂಷಣ್ ಅವರ ಆಹ್ವಾನ ರದ್ದುಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಂಬಳಕ್ಕೆ ಬ್ರಿಜ್ ಭೂಷಣ್ ಅತಿಥಿ; ಸಿದ್ದಿ ಸಮುದಾಯದ ಬೇಡಿಕೆ ಎಂದ ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ

ರಾಜಕೀಯ ವಿವಾದಕ್ಕೆ ಕಾರಣವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಶೋಕ್ ಕುಮಾರ್ ರೈ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಕಂಬಳ ಅಂದರೆ ಕಾಂಗ್ರೆಸ್‌ನವರೂ ಇದ್ದಾರೆ, ಹಾಗೆ ಬಿಜೆಪಿಯವರೂ ಇದ್ದಾರೆ. ಇದು ರಾಜಕೀಯ ಕಾರ್ಯಕ್ರಮ ಅಲ್ಲ. ಕಂಬಳಕ್ಕೆ ‘ಪೇಟಾ’ದಿಂದ ತೊಂದರೆ ಆದಾಗ ಸಿದ್ದರಾಮಯ್ಯನವರೇ ಹೋರಾಟಕ್ಕೆ ಸಹಾಯ ಮಾಡಿದ್ದರು’ ಎಂದು ತಿಳಿಸಿದ್ದಾರೆ.

ಬೆಂಗಳೂರು ತುಳುಕೂಟಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿರುವ ಬೆಂಗಳೂರು ತುಳುಕೂಟ, ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದ ಗೇಟ್ 5ರಲ್ಲಿ 151 ಮೀ ಉದ್ದದ ಕಂಬಳ‌ದ ಕೆರೆಯಲ್ಲಿ ಕಂಬಳವನ್ನು ಆಯೋಜಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X