ಐಪಿಎಲ್‌ 2023 | ಮುಂಬೈ vs ಚೆನ್ನೈ; ವಾಂಖೆಡೆಯಲ್ಲಿಂದು ʻಎಲ್‌ ಕ್ಲಾಸಿಕೊʼ

Date:

Advertisements

ಐಪಿಎಲ್‌ 16ನೇ ಆವೃತ್ತಿಯ ಬಹು ನಿರೀಕ್ಷಿತ ಬದ್ಧ ವೈರಿಗಳ ʻಎಲ್‌ ಕ್ಲಾಸಿಕೊʼ ಕದನಕ್ಕೆ ಶನಿವಾರ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ.

ಐಪಿಎಲ್‌ ಟೂರ್ನಿಯ ಅತ್ಯಂತ ಯಶಸ್ವಿ ತಂಡಗಳಾದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಮತ್ತು 4 ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ಕಿಂಗ್ಸ್‌ ತಂಡಗಳು ಇಂದು ಮುಂಬೈನಲ್ಲಿ ರಾತ್ರಿ ಮುಖಾಮುಖಿಯಾಗಲಿವೆ.

ಪ್ರಸಕ್ತ ಟೂರ್ನಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನಾಡಿರುವ ಚೆನ್ನೈ ತಲಾ ಒಂದು ಗೆಲುವು ಮತ್ತು ಸೋಲು ಕಂಡಿದೆ. ಮತ್ತೊಂದೆಡೆ ಮುಂಬೈ, ಬೆಂಗಳೂರಿನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು. 5 ದಿನಗಳ ವಿಶ್ರಾಂತಿಯ ಬಳಿಕ ತವರಿನ ಅಭಿಮಾನಗಳೆದುರು ಮೈದಾನಕ್ಕಿಳಿಯುತ್ತಿರುವ ಇಂಡಿಯನ್ಸ್‌ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದೆ.

ಮಹೇಂದ್ರ ಸಿಂಗ್ಸ್‌ ಧೋನಿ ಮತ್ತು ರೋಹಿತ್‌ ಶರ್ಮ ಮುಖಾಮುಖಿಯಾಗುತ್ತಿರುವುದು ಇಂದಿನ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿಮಾನಿಗಳ ನೆಚ್ಚಿನ ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಪಂದ್ಯ ನಡೆಯುವ ನಿರೀಕ್ಷೆ ಹೆಚ್ಚಾಗಿದೆ. ಮೇಲ್ನೋಟಕ್ಕೆ ತವರಿನಂಗಳದಲ್ಲಿ ರೋಹಿತ್‌ ಪಡೆ ಒತ್ತಡದಲ್ಲಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈನ ಬ್ಯಾಟಿಂಗ್‌-ಬೌಲಿಂಗ್‌ ದೌರ್ಬಲ್ಯ ಸ್ಪಷ್ಟವಾಗಿ ಗೋಚರಿಸಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಬೆಟ್ಟಿಂಗ್ ದಂಧೆಯಲ್ಲಿ ಬೇಯುತ್ತಿರುವ ದೇಶ; ಅಮೃತಕಾಲ-ವಿಶ್ವಗುರು ಜಪಿಸುತ್ತಿರುವ ಬಿಜೆಪಿ

ಚೆನ್ನೈಗೆ ಋತುರಾಜ್‌ ಬಲ

ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನೇ ಚೆನ್ನೈ ಬಹುವಾಗಿ ನೆಚ್ಚಿಕೊಂಡಿದೆ. ಆರಂಭಿಕ ಋತುರಾಜ್‌ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 92 ಮತ್ತು 57 ರನ್‌ಗಳಿಸಿರುವುದು ತಂಡಕ್ಕೆ ಬಲ ತುಂಬಿದೆ. 8 ಮಂದಿ ಬ್ಯಾಟರ್‌ಗಳು ತಂಡದಲ್ಲಿದ್ದಾರೆ. ಆದರೆ ಬೌಲಿಂಗ್‌ ವಿಭಾಗಕ್ಕೆ ರನ್‌ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಪಂದ್ಯದಲ್ಲಿ ಮಿಂಚಿದ್ದ ಸ್ಪಿನ್ನರ್‌ ಮೊಯಿನ್‌ ಅಲಿ, ತನ್ನ 4 ಓವರ್‌ಗಳ ದಾಳಿಯಲ್ಲಿ 26 ರನ್‌ ನೀಡಿ 4 ಪ್ರಮುಖ ವಿಕೆಟ್‌ ಪಡೆಯುವ ಮೂಲಕ ಗೆಲುವಿನ ರುವಾರಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ...

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Download Eedina App Android / iOS

X