ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ – ಮಾದವಾರ ಬಿಎಂಟಿಸಿ ಬಸ್‌ ಸೇವೆ ಆರಂಭ

Date:

Advertisements

ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್‌ ರಸ್ತೆಯ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸೇವೆ ಆರಂಭವಾಗಿದೆ.

ಮಾದವಾರ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಬೆಳಗ್ಗೆ 6:40 ರಿಂದ ರಾತ್ರಿ 8 ಗಂಟೆವರೆಗೆ ಬಿಎಂಟಿಸಿ ಬಸ್‌ ಸೇವೆ ಇರಲಿದೆ. ನವೆಂಬರ್‌ 20 ರಿಂದ ಈ ಬಸ್‌ ಸೌಲಭ್ಯ ಆರಂಭವಾಗಿದೆ.

ಬೇರೆ ಊರಿನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರು ಮೆಜೆಸ್ಟಿಕ್‌ಗೆ ತಲುಪಿ ನಂತರ ಅಲ್ಲಿಂದ ಎಲೆಕ್ಟ್ರಾನಿಕ್ ಬಸ್ ಹಿಡಿದು ಪ್ರಯಾಣ ಬೆಳೆಸಬೇಕಿತ್ತು. ಇದಕ್ಕೆ ಬರೋಬ್ಬರಿ 2 ಗಂಟೆ ಸಮಯ ಹಿಡಿಯುತ್ತಿತ್ತು. ಬಿಎಂಟಿಸಿ ಬಸ್​ ಇಲ್ಲದ ಕಾರಣ ಪ್ರಯಾಣಿಕರು ಟೆಂಪೋ, ಆಟೋ, ಲಾರಿಗಳಲ್ಲಿ ಸಂಚಾರ ಮಾಡುತ್ತಿದ್ದರು. ಈ ಮಾರ್ಗಕ್ಕೆ ಬಸ್ ಒದಗಿಸುವಂತೆ ಪ್ರಯಾಣಿಕರು ಹಲವಾರು ಬಾರಿ ಮನವಿ ಮಾಡಿದ್ದರು. ಇದೀಗ, ಬಿಎಂಟಿಸಿಯಿಂದ ಮಾದವಾರ – ಎಲೆಕ್ಟ್ರಾನಿಕ್‌ ಸಿಟಿಗೆ ನೇರ ಬಸ್‌ ಸೇವೆ ಆರಂಭವಾಗಿದೆ. ಈ ಬಸ್‌ ನೈಸ್‌ ರಸ್ತೆಯ ಮೂಲಕ ನಗರದ ಹೊರವಲಯದಲ್ಲಿಯೇ ಸಂಚರಿಸಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್​ ಸ್ಫೋಟಗೊಂಡು ಐವರಿಗೆ ಗಾಯ

ಇನ್ನು ತುಮಕೂರು ಮತ್ತು ಹಾಸನ ಕಡೆಯಿಂದ ಆಗಮಿಸುವ ಪ್ರಯಾಣಿಕರು ಮೆಜೆಸ್ಟಿಕ್‌ಗೆ ಬರುವ ತೊಂದರೆ ಇಲ್ಲದೆ, ನೇರವಾಗಿ ಮಾದವಾರದಿಂದಲೇ ಎಲೆಕ್ಟ್ರಾನಿಕ್ ಸಿಟಿ ತಲುಪಬಹುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X