ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದ ಭಾರತ

Date:

Advertisements

ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ವಿವಾದ ಏರ್ಪಟ್ಟ ಎರಡು ತಿಂಗಳ ನಂತರ ಕೆಂದ್ರ ಸರ್ಕಾರವು ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದೆ.

ಎರಡು ತಿಂಗಳ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾರತದ ಮೇಲೆ ಆರೋಪ ಮಾಡಿದ ನಂತರ ಎರಡು ದೇಶಗಳ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಉಭಯ ದೇಶಗಳಿಂದ ರಾಯಭಾರಿಗಳು ಹಾಗೂ ಸಿಬ್ಬಂದಿಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿತ್ತು.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18ರಂದು, ‘ಕೆನಡಾದ ಭದ್ರತಾ ಏಜೆನ್ಸಿಗಳು ಭಾರತೀಯ ಸರ್ಕಾರಿ ಏಜೆಂಟರು ಮತ್ತು ನಿಜ್ಜರ್ ಸಾವಿನ ನಡುವಿನ ಸಂಬಂಧವನ್ನು ತನಿಖೆ ನಡೆಸುತ್ತಿವೆ’ ಎಂದು ಹೇಳಿದರು. ಅಲ್ಲದೆ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಅವರು ಹೇಳಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗಾವಕಾಶವಿಲ್ಲ: ಆಂಧ್ರ ಹೈಕೋರ್ಟ್

ಟ್ರುಡೊ ಹೇಳಿಕೆಯ ನಂತರ, ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಪ್ರಾರಂಭವಾಯಿತು. ಭಾರತದ ಸೂಚನೆಗಳನ್ನು ಅನುಸರಿಸಿ, ಕೆನಡಾವು 41 ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಿಂದ ತಮ್ಮ ದೇಶಕ್ಕೆ ಕರೆಸಿಕೊಂಡಿತ್ತು.

ಜಸ್ಟಿನ್ ಟ್ರುಡೊ ಆರೋಪವನ್ನು ನಿರಾಕರಿಸಿದ್ದ ವಿದೇಶಾಂಗ ಇಲಾಖೆಯ ಅಧಿಕಾರಿಗಳು, ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳು ಭಾಗಿಯಾಗಿಲ್ಲ. ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದರೂ, ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರ ಒಪ್ಪಂದವನ್ನು ಮಾತುಕತೆ ನಡೆಸಲು ಕೆನಡಾದೊಂದಿಗೆ ಭಾರತವು ಚರ್ಚೆಗೆ ಮರಳಲು ಬಯಸುತ್ತದೆ ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

Download Eedina App Android / iOS

X