ವಿಜಯಪುರ ಜಿಲ್ಲೆಯಲ್ಲಿ ನಾಗಠಾಣದ ಶರಣಪ್ಪ ಅರಕೇರಿ ಎಂಬವರು 2017ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅವರಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 75 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಜಿಲ್ಲೆಯ ಜಿಲ್ಲೆಯ ನಾಗಠಾಣ ಗ್ರಾಮದ ಶರಣಪ್ಪ ಅರಕೇರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಜಮೀನಿಗೆ ಹೊಂದಿಕೊಂಡ ಜಮೀನಿನ ಮಾಲೀಕರಾದ ದುಂಡಪ್ಪ ಗಿರಿಸಾಗರ, ಅಪ್ಪಣ್ಣ ಗಿರಿಸಾಗರ, ಯಲ್ಲವ್ವ ಗಿರಿಸಾಗರ ಅವರ ಕಿರುಕುಳದಿಂದ ಶರಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಾಜಿ ಅನಂತ ನಾಲವಾಡೆ ಅವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದು, ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.