ದೇವರ ಹೆಸರಿನಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ವೃದ್ಧ ಮಹಿಳೆಯೊಬ್ಬರನ್ನು ಕೊಚ್ಚಿ ಹತ್ಯೆಗೈದ ಘಟನೆ ಮಂಗಳವಾರ ರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ನಡೆದಿದೆ.
ರತ್ನಾಬಾಯಿ (65) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಶೆಡ್‌ನಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ಆಕೆಯನ್ನು ಹರಿತವಾದ ಆಯುಧದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಆರ್‌ಜೆ ನಗರ ಪೊಲೀಸರು ತಿಳಿಸಿದ್ದಾರೆ.
ಆರ್.ಜೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸೂಕ್ತ ಮಾಹಿತಿ ತಿಳಿದು ಬಂದಿಲ್ಲ. ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.