ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಕಾರ್ಮಿಕ ರಾಕೇಶ್ (22) ಎಂಬ ಮೃತ ದುರ್ದೈವಿ. ರಾಕೇಶ್ ಇತ್ತೀಚೆಗಷ್ಠೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಮಂಗಳವಾರ ರಾತ್ರಿ ನೈಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿದ್ದರು. ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಬೂದಿ ತೆಗೆಯುವ ಮಷಿನ್ ಬೆಲ್ಟ್‌ಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.
ತಕ್ಷಣವೇ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.