ತುಮಕೂರು | ವಿದ್ಯಾರ್ಥಿ ವೇತನ ಖಾತ್ರಿ ಪಡಿಸಲು ಆಗ್ರಹಿಸಿ ಎಐಡಿಎಸ್‌ಓ ಪ್ರತಿಭಟನೆ

Date:

Advertisements

ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಓ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ, “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸೇರಿದಂತೆ ಹಲವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಅರ್ಜಿ ಹಾಕಿದ್ದ ವಿದ್ಯಾರ್ಥಿವೇತನಗಳು ಇಲ್ಲಿಯವರೆಗೂ ಕೂಡ ವಿದ್ಯಾರ್ಥಿಗಳಿಗೆ ದೊರೆತಿಲ್ಲ. ಇನ್ನು ಕೆಲವು ದಿನಗಳ ಹಿಂದಷ್ಟೇ ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.

ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಮಾತನಾಡಿ, “ಶಿಕ್ಷಣ ವ್ಯವಸ್ಥೆ ವ್ಯಾಪಾರಿಕರಣಗೊಂಡು ಶುಲ್ಕಗಳು ಗಗನಕ್ಕೇರಿವೆ. ಬಡ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುವುದೇ ಅತ್ಯಂತ ದುಸ್ತರವಾಗಿರುವ ಕಾಲದಲ್ಲಿ ಸರ್ಕಾರದ ಶಿಷ್ಯವೇತನವು ಸಾಕಷ್ಟು ಸಹಕಾರಿಯಾಗಿದೆ. ಈ ಶಿಷ್ಯವೇತನದಿಂದಾಗಿ ಬಡ ವಿದ್ಯಾರ್ಥಿಗಳು ಪಿಯ, ಪದವಿ ಸೇರಿದಂತೆ ಇಂಜಿನಿಯರಿಂಗ್ ಮತ್ತು ಮೆಡಿಕಲ್ ನಂತಹ ಉನ್ನತ ವ್ಯಾಸಂಗವನ್ನು ಕೂಡ ಪಡೆಯಬಹುದಾಗಿದೆ. ಆದರೆ ಈಗ ಭಾರೀ ಪ್ರಮಾಣದಲ್ಲಿ ಶಿಷ್ಯವೇತನದ ಮೊತ್ತವನ್ನು ಕಡಿತಗೊಳಿಸಿರುವುದು ಹಾಗೂ ವಿತರಣೆಯಲ್ಲಿ ದೀರ್ಘ ವಿಳಂಬವಾಗಿರುವುದು ಕಾರ್ಮಿಕರ ಹಾಗೂ ಬಡಮಕ್ಕಳ ಶಿಕ್ಷಣದ ಕನಸುಗಳನ್ನು ಚಿವುಟಿ ಹಾಕಿದಂತಾಗಿದೆ” ಎಂದು ಕಿಡಿಕಾರಿದ್ದಾರೆ.

Advertisements

“ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ಹಣವನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು. ಸೆಸ್ ಹೆಸರಲ್ಲಿ ಸಂಗ್ರಹವಾಗುತ್ತಿರುವ ಹಣವು ಕಾರ್ಮಿಕರ ಬೆವರಿನ ಫಲ. ಮತ್ತು ಇದನ್ನು ಸಂಪೂರ್ಣವಾಗಿ ಅವರ ಏಳಿಗೆಗೆ ಬಳಸಬೇಕು. ಸರ್ಕಾರವು ಈ ಕುರಿತು ಗಮನ ಹರಿಸಿ ಕೂಡಲೇ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯಕರ್ತರಾದ ಪಲ್ಲವಿ, ಪುನೀತ್, ಮನೋಜ್ ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X